ಮೈಸೂರು: ವಿಶ್ವಗುರು ಬಸವಣ್ಣ ಅವರನ್ನು ‘ಸಾಂಸ್ಕೃತಿಕ ನಾಯಕ’ ಹಾಗೂ ಕಡ್ಡಾಯವಾಗಿ ಎಲ್ಲ ಸರ್ಕಾರಿ ಕಚೇರಿಗಳಲ್ಲೂ ಬಸವಣ್ಣನವರ ಭಾವಚಿತ್ರ ಹಾಕಬೇಕೆಂದು ಘೋಷಿಸಿರುವ ಸರ್ಕಾರದ ಕ್ರಮ ಶ್ಲಾಘನೀಯ ಎಂದು ಕೆ.ಆರ್.ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ ಹೇಳಿದರು.
ನಗರದ ಕಾಡಾ ಕಚೇರಿಯಲ್ಲಿ ಗುರುವಾರ ವಿಶ್ವಗುರು ಬಸವೇಶ್ವರರ ಭಾವಚಿತ್ರ ನೀಡುವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೃಷ್ಣರಾಜ ಯುವ ಬಳಗದ ವತಿಯಿಂದ ಕೃಷ್ಣರಾಜ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಎಲ್ಲ ಸರ್ಕಾರಿ ಕಚೇರಿಗಳು ಹಾಗೂ ಶಾಲೆಗಳಿಗೆ ವಿಶ್ವಗುರು ಬಸವೇಶ್ವರರ ಭಾವಚಿತ್ರ ನೀಡುವ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.
ಕಾಂಗ್ರೆಸ್ ಮುಖಂಡ ಪ್ರದೀಪ್‌ಕುಮಾರ್ ಮಾತನಾಡಿ, ಬಸವಣ್ಣನವರ ತತ್ವಾದರ್ಶಗಳನ್ನು ಪಾಲಿಸುವ ಮೂಲಕ ಉತ್ತಮ ಸಮಾಜ ನಿರ್ಮಿಸೋಣ ಎಂದು ಹೇಳಿದರು.
ಬಳಗದ ಅಧ್ಯಕ್ಷ ನವೀನ್ ಕೆಂಪಿ ಮಾತನಾಡಿದರು. ನಟ ಸಿದ್ದಪ್ಪ, ಕೆಪಿಸಿಸಿ ಸದಸ್ಯ ನಜರ್‌ಬಾದ್ ನಟರಾಜ್, ಹಿಂದುಳಿದ ವರ್ಗದ ಜಾಗೃತಿ ವೇದಿಕೆ ಅಧ್ಯಕ್ಷ ಕೆ.ಶಿವರಾಂ, ಮುಖಂಡರಾದ ಶಿವಣ್ಣ, ಲೋಕೇಶ್ ಕುಮಾರ್, ಎಚ್.ವಿ.ಭಾಸ್ಕರ್, ಕಡಕೊಳ ಶಿವಲಿಂಗ, ಬಿ.ನಾಗರಾಜ್, ಮಂಜು, ವೆಂಕಟೇಶ್, ಪುಟ್ಟಣ್ಣ ಇದ್ದರು.