ಜಿಲ್ಲೆ

ಜೂನ್​​ 1ರಿಂದ ಬಿಎಂಟಿಸಿ ವಿದ್ಯಾರ್ಥಿ ಬಸ್‌ಪಾಸ್ ವಿತರಣೆ

ಆರ್.ತುಳಸಿಕುಮಾರ್

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು (ಬಿಎಂಟಿಸಿ) ಉಚಿತ/ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ಪಾಸ್‌ಗಳನ್ನು ವಿತರಿಸುತ್ತಿದ್ದು, 2024-25ನೇ ಸಾಲಿಗೆ ಈಗಾಗಲೇ ಆನ್‌ಲೈನ್ ಮೂಲಕ ಸ್ವೀಕರಿಸಿರುವ ಅರ್ಜಿ ಪರಿಶೀಲಿಸಿ ಜೂ.1ರಿಂದ ಬೆಂಗಳೂರು ಒನ್ ಕೇಂದ್ರಗಳ ಮೂಲಕ ವಿತರಿಸಲಿದೆ.

ವಿದ್ಯಾರ್ಥಿಗಳು ಬೆಂಗಳೂರು ಒನ್ ಕೇಂದ್ರಗಳ ಮೂಲಕ ವಿದ್ಯಾರ್ಥಿ ಪಾಸ್‌ಗಾಗಿ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿ ಪಾಸ್‌ಗಳನ್ನು ಬೆಳಿಗ್ಗೆ 8ರಿಂದ ಸಂಜೆ 6.30ರವರೆಗೆ ವಾರದ ಎಲ್ಲ ದಿನಗಳಲ್ಲಿ ಬೆಂಗಳೂರು ಒನ್ ಕೇಂದ್ರಗಳಲ್ಲಿ ಹಾಗೂ ಬಿಎಂಟಿಸಿಯ ಕೆಂಪೇಗೌಡ ಬಸ್ ನಿಲ್ದಾಣ, ಕೆಂಗೇರಿ ಟಿಟಿಎಂಸಿ, ಹೊಸಕೋಟೆ, ಎಲೆಕ್ಟ್ರಾನಿಕ್ ಸಿಟಿ ಘಟಕ -19, ಶಾಂತಿನಗರ ಟಿಟಿಎಂಸಿ ಹಾಗೂ ಕೆಎಸ್‌ಆರ್‌ಟಿಸಿಯ ಆನೇಕಲ್ ಬಸ್ ನಿಲ್ದಾಣದಲ್ಲಿ ವಿತರಿಸಲಾಗುತ್ತದೆ.

ಶಕ್ತಿ ಯೋಜನೆಯಡಿ ರಾಜ್ಯದ ವಿದ್ಯಾರ್ಥಿನಿಯರಿಗೆ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿದ್ದು, ಅದರಂತೆ ಶಾಲಾ-ಕಾಲೇಜಿನ ವಿದ್ಯಾರ್ಥಿನಿಯರು ಉಚಿತ ಪ್ರಯಾಣ ಸೌಲಭ್ಯ ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ದೂ: 080-22483777 ಸಂಪರ್ಕಿಸಬಹುದು ಅಥವಾ ಸಂಸ್ಥೆಯ ಜಾಲತಾಣದ ಮೂಲಕ ಮಾಹಿತಿ ಪಡೆಯಬಹುದಾಗಿದೆ ಎಂದು ಬಿಎಂಟಿಸಿಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.