ಪಾಂಡವಪುರ: ಕೇಂದ್ರ ಸಚಿವ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ 65ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಜೆಡಿಎಸ್ ಮುಖಂಡರು ಮತ್ತು ಅಭಿಮಾನಿಗಳು ಪಟ್ಟಣದ ಉಪವಿಭಾಗೀಯ ಆಸ್ಪತ್ರೆ ಒಳ ರೋಗಿಗಳಿಗೆ ಹಣ್ಣುಹಂಪಲು ವಿತರಿಸಿದರು.
ಪುರಸಭೆ ಸದಸ್ಯ ಆರ್.ಸೋಮಶೇಖರ್ ನೇತೃತ್ವದಲ್ಲಿ ಆಗಮಿಸಿದ ಜೆಡಿಎಸ್ ಕಾರ್ಯಕರ್ತರು ಆಸ್ಪತ್ರೆಯ ಒಳ ಹಾಗೂ ಹೊರ ರೋಗಿಗಳಿಗೆ ಹಣ್ಣುಹಂಪಲು ವಿತರಿಸಿ ನೆಚ್ಚಿನ ನಾಯಕನಿಗೆ ಶುಭ ಕೋರಿದರು.
ಬಳಿಕ ಪುರಸಭೆ ಸದಸ್ಯ ಆರ್.ಸೋಮಶೇಖರ್ ಮಾತನಾಡಿ, ರಾಜ್ಯದ ಮಾಜಿ ಮುಖ್ಯಮಂತ್ರಿ, ಕೇಂದ್ರದ ಮೋದಿ ಸಂಪುಟದಲ್ಲಿ ಉಕ್ಕು ಹಾಗೂ ಬೃಹತ್ ಕೈಗಾರಿಕೆ ಸಚಿವರಾಗಿ ಕೆಲಸ ಮಾಡುತ್ತಿರುವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ತಾಯಿ ಚಾಮುಂಡೇಶ್ವರಿ ಹೆಚ್ಚಿನ ಆರೋಗ್ಯ, ಆಯಸ್ಸು ನೀಡಲಿ, ಮುಂದಿನ ದಿನಗಳಲ್ಲಿ ರಾಜ್ಯದ ಮುಖ್ಯಮಂತ್ರಿ ಆಗಿ ರಾಜ್ಯದ ರೈತರು, ಬಡವರು, ಶೋಷಿತರು, ದೀನದಲಿತರ ಪರವಾಗಿ ಕೆಲಸ ಮಾಡುವ ಶಕ್ತಿ ನೀಡಲೆಂದು ಹಾರೈಸಿದರು.
ಪುರಸಭೆ ಅಧ್ಯಕ್ಷೆ ಜ್ಯೋತಿಲಕ್ಷ್ಮೀ, ಸದಸ್ಯ ಎಂ.ಗಿರೀಶ್, ಜೆಡಿಎಸ್ ಮುಖಂಡ ಚಿಕ್ಕಾಡೆ ಚೇತನ್, ರಾಜೇಶ್, ಬೊಮ್ಮರಾಜು, ರಾಚಯ್ಯ, ಟೌನ್ ಗುರು ಇತರರು ಇದ್ದರು.