ಕಟ್ಟಡ ಕಾರ್ಮಿಕರ ಪ್ರತಿಭಾನ್ವಿತ ಮಕ್ಕಳಿಗೆ ಶಾಸಕ ಸಿಮೇಂಟ್ ಮಂಜು ಮಂಗಳವಾರ ಲ್ಯಾಪ್‌ಟಾಪ್ ವಿತರಿಸಿದರು. ಜಿಲ್ಲಾ ಕಾರ್ಮಿಕ ಇಲಾಖೆ ಅಧಿಕಾರಿ ಯಮುನಾ, ತಾಲೂಕು ಕಾರ್ಮಿಕ ಇಲಾಖೆ ಸಹಾಯಕ ನಿರ್ದೇಶಕ ರವಿ ಇತರರು ಇದ್ದರು. 
ಜಿಲ್ಲೆ

ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ

ರವಿಕುಮಾರ್ ಪಿ. ಕೆ

ಸಕಲೇಶಪುರ: ಸರ್ಕಾರ ಜಾರಿಗೊಳಿಸಿರುವ ಯೋಜನೆಗಳ ಬಗ್ಗೆ ಕಟ್ಟಡ ಕಾರ್ಮಿಕರಿಗೆ ಅಧಿಕಾರಿಗಳು ಸೂಕ್ತ ತಿಳಿವಳಿಕೆ ಮೂಡಿಸುವ ಕೆಲಸ ಮಾಡಬೇಕು ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.

ಮಂಗಳವಾರ ತಾಪಂ ಸಭಾಂಗಣದಲ್ಲಿ ಕಾರ್ಮಿಕ ಇಲಾಖೆ ಹಮ್ಮಿಕೊಂಡಿದ್ದ ಕಟ್ಟಡ ಕಾರ್ಮಿಕರ ಪ್ರತಿಭಾನಿತ್ವ ಮಕ್ಕಳಿಗೆ ಲ್ಯಾಪ್‌ಟಾಪ್ ಹಾಗೂ ಇತರ ಪರಿಕರ ವಿತರಿಸಿ ಮಾತನಾಡಿದರು.

ಕಾರ್ಮಿಕರ ಇಲಾಖೆಯ ಹಲವಾರು ಯೋಜನೆಗಳು ಕಾರ್ಮಿಕರಿಗೆ ತಿಳಿಯದೆ ವಿಫಲಗೊಳ್ಳುತ್ತಿವೆ. ಆದ್ದರಿಂದ, ಕಟ್ಟಡ ಕಾರ್ಮಿಕರನ್ನು ಗುರುತಿಸಿ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳ ಬಗ್ಗೆ ಸೂಕ್ತ ಮಾಹಿತಿ ನೀಡಬೇಕು. ಆಗ ಈ ವರ್ಗದ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು, ಪಾಲಕರಿಗೆ ಹಾಗೂ ಸಮಾಜಕ್ಕೆ ಹೆಸರು ತರುವಂಥವರಾಗುತ್ತಾರೆಂದರು.

ಜಿಲ್ಲಾ ಕಾರ್ಮಿಕ ಇಲಾಖೆ ಅಧಿಕಾರಿ ಯಮುನಾ, ತಾಲೂಕು ಕಾರ್ಮಿಕ ಇಲಾಖೆ ಸಹಾಯಕ ನಿರ್ದೇಶಕ ರವಿ ಇತರರು ಇದ್ದರು.