ಮಂಡ್ಯ: ಮಾಹಿತಿ ತಂತ್ರಜ್ಞಾನ ಮತ್ತು ಇಂಟರ್ನೆಟ್ ವ್ಯವಸ್ಥೆಯಲ್ಲಿ ಕ್ರಾಂತಿ ತಂದು ನವ ಭಾರತ ನಿರ್ಮಾಣವನ್ನು ಸಾಕಾರಗೊಳಿಸಿದ ಕೀರ್ತಿ ರಾಜೀವ್ ಗಾಂಧಿ ಅವರಿಗೆ ಸಲ್ಲುತ್ತದೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಎಚ್.ಬಿ.ಶುಭದಾಯಿನಿ ಹೇಳಿದರು.
ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಜನ್ಮದಿನಾಚರಣೆ ಅಂಗವಾಗಿ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ನಗರದ ಗಿರಿಜಾ ಶ್ರಮಿಕ ಬಡಾವಣೆಯಲ್ಲಿ ಹೆಣ್ಣು ಮಕ್ಕಳಿಗೆ ಸ್ಯಾನಿಟರಿ ಪ್ಯಾಡ್ ವಿತರಿಸಿ ಮಾತನಾಡಿದ ಅವರು, ಇಂದು ಶ್ರೀಸಾಮಾನ್ಯನ ಕೈಯಲ್ಲಿ ಮೊಬೈಲ್ ಬರಲು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ಕಾರಣ ಎಂದರು.
ರಾಜೀವ್‌ಗಾಂಧಿ ಕಿರಿಯ ವಯಸ್ಸಿನಲ್ಲಿ ಪ್ರಧಾನ ಮಂತ್ರಿಯಾಗಿ ಭಾರತವನ್ನು ಶಕ್ತಿಶಾಲಿ ರಾಷ್ಟ್ರವನ್ನಾಗಿ ಮಾಡಿದರು. 18 ವರ್ಷ ತುಂಬಿದವರಿಗೆ ಮತದಾನದ ಹಕ್ಕು ನೀಡಿದರು. ಉನ್ನತ ಶಿಕ್ಷಣಕ್ಕೆ ಮಹತ್ವ ನೀಡಿ ಅನೇಕ ವಿಶ್ವವಿದ್ಯಾಲಯ ಸ್ಥಾಪಿಸಿದರು. ಅಂತೆಯೇ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಪಡಿಸಿದರು ಎಂದರು.
ಮಹಿಳಾ ಕಾಂಗ್ರೆಸ್ ಮುಖಂಡರಾದ ಜ್ಯೋತಿ, ಸುನಿತಾ ರಾಜೇಶ್, ಹನ್ಸಿಯಬಾನು, ಶಕುಂತಲಾ, ಸರ್ವಮಂಗಳಾ, ಗುಣಲಕ್ಷ್ಮೀ, ಅನುರಾಧಾ, ಪದ್ಮಾ ಮೋಹನ್, ಗೀತಾ, ಸುವರ್ಣವತಿ, ಜಯಲಕ್ಷ್ಮೀ, ರೇವತಿ, ರಾಜಮ್ಮ ಇತರರಿದ್ದರು.