ಮದ್ದೂರು: ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ಹುಟ್ಟು ಹಬ್ಬದ ಅಂಗವಾಗಿ ರೈತ ಸಂಘದ ವತಿಯಿಂದ ಮಂಗಳವಾರ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ತಾಲೂಕಿನ ವಳಗೆರೆಹಳ್ಳಿ ಗ್ರಾಮದಲ್ಲಿ ವಿವಿಧ ರೀತಿಯ ಸಸಿಗಳನ್ನು ನೆಡುವುದರ ಜತೆಗೆ ರೈತರಿಗೆ ಸಸಿಗಳನ್ನು ವಿತರಣೆ ಮಾಡಲಾಯಿತು. ನಂತರ ಪಟ್ಣಣದ ಗುರುಶಾಂತಪ್ಪ ಸರ್ಕಾರಿ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು.
ರೈತ ಸಂಘದ ಜಿಲ್ಲಾಧ್ಯಕ್ಷ ಕೆಂಪೂಗೌಡ ಮಾತನಾಡಿ, ಶಾಸಕ ದರ್ಶನ್‌ಪುಟ್ಟಣ್ಣಯ್ಯ ಜನಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ರೈತ ಸಂಘವನ್ನು ಮತ್ತಷ್ಟು ಬಲಿಷ್ಠಗೊಳಿಸಲಾಗುವುದು. ಸರ್ಕಾರದ ಮಟ್ಟದಲ್ಲಿ ಹೋರಾಟ ಮಾಡಿ ಜಿಲ್ಲೆಗೆ ಹೊಸ ಯೋಜನೆಗಳನ್ನು ಜಾರಿಗೆ ತಂದು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು.
ರೈತ ಸಂಘದ ತಾಲೂಕು ಅಧ್ಯಕ್ಷ ವಳಗೆರೆಹಳ್ಳಿ ಉಮೇಶ್, ಎಪಿಎಂಸಿ ಮಾಜಿ ಉಪಾಧ್ಯಕ್ಷೆ ಮಮತಾ ಶಂಕರೇಗೌಡ, ತಾಪಂ ಮಾಜಿ ಸದಸ್ಯ ಚಿಕ್ಕಮರಿಯಪ್ಪ, ಮುಖಂಡ ಬಿ.ವಿ.ಶಂಕರೇಗೌಡ, ರೈತ ಸಂಘದ ಮುಖಂಡರಾದ ಬೋರಪುರದ ಶಂಕರೇಗೌಡ, ವಳಗೆರೆಹಳ್ಳಿ ಅಲೋಕ, ವಿನೋದ್‌ಬಾಬು, ವೀರಪ್ಪ, ಗೋವಿಂದೇಗೌಡ್ರು, ದೇವರಾಜು, ನಾಗರಾಜು, ಸಂತೋಷ್, ಸಿದ್ದೇಗೌಡ, ಅರುಣ್, ಅನಿಲ್, ಜಿ.ಎ.ಶಂಕರ್ ಇತರರು ಇದ್ದರು.