ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲೆಯಲ್ಲಿ 2025- 26ನೇ ಸಾಲಿನ ಹಿಂಗಾರು ಹಂಗಾಮಿನ ಬಿತ್ತನೆ ಬೀಜಗಳನ್ನು ವಿತರಿಸಲು 14 ರೈತ ಸಂಪರ್ಕ ಕೇಂದ್ರಗಳು ಹಾಗೂ 13 ಹೆಚ್ಚುವರಿ ಬೀಜ ವಿತರಣಾ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
ನಗರದ ಜಿಲ್ಲಾಽಕಾರಿ ಕಚೇರಿ ಆವರಣದಲ್ಲಿ ಕೃಷಿ ಇಲಾಖೆಯಿಂದ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರೈತರಿಗೆ ಹಿಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದು, ಹಿಂಗಾರು ಬಿತ್ತನೆ ಪ್ರಾರಂಭವಾಗಿದೆ. ಕೃಷಿ ಇಲಾಖೆಯು ಹಿಂಗಾರು ಹಂಗಾಮಿಗೆ ಕಡಲೆ, ಗೋಽ, ಜೋಳ, ಮೆಕ್ಕೆಜೋಳ, ಶೇಂಗಾ ಹಾಗೂ ವಿವಿಧ ಬೆಳೆಗಳ ಬೀಜಗಳನ್ನು ರಿಯಾಯಿತಿ ದರದಲ್ಲಿ ಮಾರಾಟ ಮಾಡುತ್ತಿದೆ. ರೈತರು ಇದರ ಸದುಪಯೋಗ ಪಡೆಯಬೇಕು ಎಂದರು.
ಇಲಾಖೆಯಿ0ದ ಸಹಾಯಧನದಲ್ಲಿ ಬೀಜ ವಿತರಣೆಗೆ 28,799 ಕ್ವಿಂಟಲ್ ಕಡಲೆ, 385 ಕ್ವಿಂಟಲ್ ಗೋಽ, 300 ಕ್ವಿಂಟಲ್ ಜೋಳ, 276 ಕ್ವಿಂಟಲ್ ನೆಲಗಡಲೆ ಹಾಗೂ ಇನ್ನಿತರೆ ಬೀಜ ಸೇರಿ 29,906 ಕ್ವಿಂಟಲ್ ವಿತರಣೆ ಗುರಿ ಹೊಂದಲಾಗಿದೆ. ಜಿಲ್ಲೆಯ 27 ಕೇಂದ್ರಗಳಲ್ಲಿ ದಾಸ್ತಾನು ಮಾಡಿ, ವಿತರಣೆ ಆರಂಭಿಸಲಾಗಿದೆ ಎಂದರು.
ಶಾಸಕ ಎನ್.ಎಚ್. ಕೋನರಡ್ಡಿ, ಪ್ರಭಾರ ಜಿಲ್ಲಾಧಿಕಾರಿ ಹಾಗೂ ಜಿ.ಪಂ. ಸಿಇಒ ಭುವನೇಶ ಪಾಟೀಲ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಕೃಷಿ ಇಲಾಖೆ ಜಂಟಿ ನಿದೇರ್ಶಕ ಮಂಜುನಾಥ ಅಂತರವಳ್ಳಿ ಹಾಗೂ ರೈತರು ಉಪಸ್ಥಿತರಿದ್ದರು.