ಮಡಿಕೇರಿ: ಮೇಕೇರಿಯ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ೪೧ ಟ್ರ್ಯಾಕ್ ಸೂಟ್‌ಗಳನ್ನು ವಿತರಿಸಲಾಯಿತು.
ರೋಟರಿ ಜಿಲ್ಲಾ ಗವರ್ನರ್ ಎಚ್.ಆರ್.ಕೇಶವ್ ಶಾಲಾ ಸಭಾಂಗಣದಲ್ಲಿ ಇತ್ತೀಚೆಗೆ ಶಾಲೆಯ ೪೧ ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಸೂಟ್ ವಿತರಿಸಿದರು. ವಿದ್ಯಾರ್ಥಿಗಳು ತಾವು ಶಿಕ್ಷಣ ಪಡೆದ ಶಾಲೆಯನ್ನು ಸದಾ ಯೋಚನೆಯಲ್ಲಿರಿಸಿಕೊಂಡು ಉತ್ತಮ ಸ್ಥಾನ ಪಡೆದ ಬಳಿಕ ಆ ಶಾಲೆಗೆ ಸೂಕ್ತ ನೆರವು ನೀಡುವ ಮೂಲಕ ಮಾದರಿಗಳಾಗಬೇಕೆಂದು ಈ ಸಂದಭಧ ಕೇಶವ್ ಕಿವಿಮಾತು ಹೇಳಿದರು.
ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಪ್ರಮೋದ್ ಕುಮಾರ್ ರೈ, ಕಾರ್ಯದರ್ಶಿ ರತ್ನಾಕರ್ ರೈ, ಸಹಾಯಕ ಗವರ್ನರ್ ದೇವಣಿರ ತಿಲಕ್, ವಲಯ ಸೇನಾನಿ ಎಸ್.ಎಸ್.ಸಂಪತ್ ಕುಮಾರ್, ಶಾಲಾ ಆಡಳಿತ ಮಂಡಳಿ ಅಧ್ಯಕ್ಷೆ ಅನಿತಾ, ಶಾಲಾ ಮುಖ್ಯಶಿಕ್ಷಕಿ ಸಬಿತ, ಗ್ರಾ.ಪಂ. ಸದಸ್ಯರಾದ ಹನೀಫ್, ಮುತ್ತಮ್ಮ, ಪಿಡಿಓ ಶ್ರೀಧರ್, ಶಿಕ್ಷಕಿಯರಾದ ಲಾವಣ್ಯ, ಶ್ರೀಲತಾ, ರೇಖಾ, ವಿದ್ಯಾರ್ಥಿಗಳ ಪೋಷಕರು ಹಾಜರಿದ್ದರು.