ಅಂಗವಿಕಲರಿಗೆ ವಿದ್ಯುತ್ ಚಾಲಿತ ತ್ರಿಚಕ್ರ ವಾಹನಗಳನ್ನು ಶಾಸಕ ಸಿಮೆಂಟ್ ಮಂಜು ನೀಡಿದರು. ರಾಮಕೃಷ್ಣ, ಆದಿತ್ಯ, ಹರೀಶ್ ಇತರರು ಇದ್ದರು. 
ಜಿಲ್ಲೆ

ಅಂಗವಿಕಲರಿಗೆ ತ್ರಿಚಕ್ರ ವಾಹನ ವಿತರಣೆ

ಸಕಲೇಶಪುರ: ವಿದ್ಯುತ್ ಚಾಲಿತ ತ್ರಿಚಕ್ರ ವಾಹನಗಳು ಅಂಗವಿಕಲರ ಸ್ವಾವಲಂಬಿ ಬದುಕಿಗೆ ಸಹಕಾರಿಯಾಗಲಿದೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.

ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿ ಬುಧುವಾರ ಅಂಗವಿಕಲರಿಗೆ ವಿದ್ಯುತ್ ಚಾಲಿತ ತ್ರಿಚಕ್ರ ವಾಹನಗಳನ್ನು ವಿತರಿಸಿ ಮಾತನಾಡಿ, 2022-23 ಸಾಲಿನ ಶೇ.5ರಷ್ಟು ಮೀಸಲಾಯಿತಿ ವೆಚ್ಚದಡಿ 7 ತ್ರಿಚಕ್ರ ವಾಹನಗಳನ್ನು ಹಸ್ತಾಂತರಿಸಲಾಗಿದೆ. ಅಂಗವಿಕಲರು ಮುಖ್ಯವಾಹಿನಿಗೆ ಬರಲು ಸರ್ಕಾರ ವಿವಿಧ ಯೋಜನೆ ರೂಪಿಸಿ ಪ್ರತ್ಯೇಕ ಅನುದಾನ ಮೀಸಲಿಡುತ್ತಿದೆ. ಅಂಗವಿಕರು ನ್ಯೂನತೆಯ ಬಗ್ಗೆ ಮಾನಸಿಕವಾಗಿ ಕುಗ್ಗದೇ ಆತ್ಮಸ್ಥೈರ್ಯ ರೂಢಿಸಿಕೊಂಡಾಗ ಮಾತ್ರ ಸಾಧನೆ ಸಾಧ್ಯ ಎಂದರು.

ತಾಲೂಕು ಪಂಚಾಯತಿ ಕಾರ್ಯನಿರ್ವಾಣಾಧಿಕಾರಿ ರಾಮಕೃಷ್ಣ, ತಾಪಂ ಸಹಾಯಕ ನಿರ್ದೇಶಕ ಆದಿತ್ಯ, ಹರೀಶ್ ಇತರರು ಇದ್ದರು.