ಯಾದಗಿರಿ: ಜಿಲ್ಲೆಯಲ್ಲಿ ಇಬ್ಬರಿಗೆ ಕೋವಿಡ್-19 ಪಾಸಿಟಿವ್ ಸೋಂಕು ದೃಢಪಟ್ಟಿರುವುದರಿಂದ ಇದನ್ನು ತಡೆಯಲು 12ರ ಮಧ್ಯರಾತ್ರಿಯಿಂದ ಮೇ 17ರ ಮಧ್ಯರಾತ್ರಿವರೆಗೆ ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಎಂ.ಕೂಮರ್ಾರಾವ್ ಆದೇಶ ಹೊರಡಿಸಿದ್ದಾರೆ.
ಬಟ್ಟೆ, ಚಿನ್ನದ ಅಂಗಡಿ ಹೊರತುಪಡಿಸಿ, ಜಿಲ್ಲೆಯಲ್ಲಿ ಎಲ್ಲ ಅಂಗಡಿಗಳನ್ನು ಬೆಳಗ್ಗೆ 7ರಿಂದ ಮಧ್ಯಾಹ್ನ 1ರವರೆಗೆ ಮಾತ್ರ ತೆರೆಯಲು ಅನುಮತಿ ನೀಡಿದ್ದಾರೆ. ನಿಷೇಧಾಜ್ಞೆ ಅವಧಿಯಲ್ಲಿ ಜಿಲ್ಲಾದ್ಯಂತ ದಿನಸಿ, ತರಕಾರಿ, ಹಾಲು, ಹಣ್ಣು-ಹಂಪಲು, ಪೆಟ್ರೋಲ್ ಬಂಕ್ ಹಾಗೂ ಅತ್ಯವಶ್ಯಕ ಇನ್ನಿತರೆ ಅಂಗಡಿಗಳು ಮಾತ್ರ ತೆರೆದಿರುತ್ತವೆ. ಕೃಷಿ ಹಾಗೂ ತೋಟಗಾರಿಕೆಗೆ ಸಂಬಂಧಿಸಿದ ಎಲ್ಲ ಚಟುವಟಿಕೆಗಳಿಗೆ ಬೇಕಾಗುವ ರಸಗೊಬ್ಬರ, ಕೀಟನಾಶಕಗಳು ಮತ್ತು ಬೀಜಗಳ ಉತ್ಪಾದನೆ ವಿತರಣೆ ಮತ್ತು ಚಿಲ್ಲರೆ ಅಂಗಡಿಗಳು ಯಂತ್ರೋಪಕರಣಗಳ ಅದರ ಬಿಡಿಭಾಗಗಳ ಪೂರೈಕೆ ಮತ್ತು ರಿಪೇರಿ ಸೇರಿದಂತೆ ಅವಶ್ಯಕವಿರುವ ಅಂಗಡಿಗಳು ಜಿಲ್ಲೆಯಾದ್ಯಂತ ಬೆಳಗ್ಗೆ 7ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಾತ್ರ ತೆರೆದಿರುತ್ತವೆ ಎಂದು ಅವರು ತಿಳಿಸಿದ್ದಾರೆ.
ಮದ್ಯ ಮಾರಾಟ ಸನ್ನದುಗಳಾದ ಸಿಎಲ್-02, ಸಿಎಲ್-04, ಸಿಎಲ್-07, ಸಿಎಲ್-09 ಹಾಗೂ ಸಿಎಲ್-11 ಸಿ (ಎಂಎಸ್ಐಎಲ್ ಮದ್ಯ ಮಳಿಗೆಗಳು) ಜಿಲ್ಲಾದ್ಯಂತ ಬೆಳಗ್ಗೆ 7ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸರ್ಕಾರ ನೀಡಿರುವ ಮಾರ್ಗಸೂಚಿಗಳನ್ವಯ ಮಾತ್ರ ಕಾರ್ಯನಿರ್ವಹಿಸತಕ್ಕದ್ದು ಎಂದು ಅವರು ಸೂಚಿಸಿದ್ದಾರೆ.
ಅಂಗಡಿ, ಕಾರ್ಖಾನೆ, ಸಾರ್ವಜನಿಕ ಸ್ಥಳ ಅಥವಾ ಇನ್ನಿತರೆ ಮಾಲೀಕರು ಕಡ್ಡಾಯವಾಗಿ ಆಯಾ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳಿಗೆ ಮುಚ್ಚಳಿಕೆ ಪತ್ರವನ್ನು ನೀಡತಕ್ಕದ್ದು. ಸಾರ್ವಜನಿಕರು ತುತರ್ು ಸೇವೆಗೆ ಹೊರತುಪಡಿಸಿ ಅನಗತ್ಯವಾಗಿ ಮನೆಯಿಂದ ಹೊರಗೆ ಬಂದಿರುವುದು ಕಂಡುಬಂದಲ್ಲಿ ಅಂತಹ ವ್ಯಕ್ತಿಗಳ ವಿರುದ್ಧ ಕಾನೂನಿನ್ವಯ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಹೊರ ರಾಜ್ಯದಿಂದ ಬರುವ ವಲಸೆ ಕಾರ್ಮಿಕರು, ಕೂಲಿ ಕಾರ್ಮಿಕರು, ಪ್ರವಾಸಿಗರು ಕಡ್ಡಾಯವಾಗಿ 14 ದಿನಗಳವರೆಗೆ ಇನ್ಸ್ಟಿಟ್ಯೂಶನಲ್ ಕ್ವಾರಂಟೈನ್ಗಳಲ್ಲಿ ಇರತಕ್ಕದ್ದು. ಒಂದು ವೇಳೆ ಈಗಾಗಲೇ ಜಿಲ್ಲೆಗೆ ಆಗಮಿಸಿರುವ ಕಾಮರ್ಿಕರು ಅಥವಾ ವಲಸೆಗಾರರು ಕೆಲವೊಂದು ಗ್ರಾಮಗಳಲ್ಲಿ ಅನವಶ್ಯಕವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಓಡಾಟ ಮಾಡುತ್ತಿರುವುದು ವರದಿಯಾದಲ್ಲಿ ಅಂತಹ ವ್ಯಕ್ತಿಗಳ ವಿರುದ್ಧ ಕಾನೂನಿನ್ವಯ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.