ವಿಜಯಪುರ : ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗದ ಪರೀಾ ಕೇಂದ್ರದಲ್ಲಿ ಮೇ 10 ರಿಂದ ಮೇ 12 ರವರೆಗೆ 2024ನೇ ಸಾಲಿನ ದ್ವೀತಿಯ ಅಧಿವೇಶನದ ಪರೀೆಗಳು ನಡೆಯಲಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಹಾಗೂ ಮುನ್ನೆಚ್ಚರಿಕೆ ಕ್ರಮವಾಗಿ ಪರೀಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶದಲ್ಲಿ ನಿಷೇಧಾೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಯೂ ಆದ ಜಿಲ್ಲಾಧಿಕಾರಿ ಟಿ. ಭೂಬಾಲನ್ ಆದೇಶ ಹೊರಡಿಸಿದ್ದಾರೆ.
ಪರೀಾ ದಿನದಂದು ಪರೀೆಯಲ್ಲಿ ತೊಡಗಿರುವ ಯಾವುದೇ ಅಧಿಕಾರಿ, ಸಿಬ್ಬಂದಿ ಹಾಗೂ ಅಭ್ಯರ್ಥಿಗಳು ಮೊಬೈಲ್ ಫೋನ್, ಸ್ಮಾರ್ಟ್ವಾಚ್, ಬ್ಲೂಟೂತ್ ಡಿವೈಸ್, ಪೇಜರ್, ವೈರ್ಲೆಸ್, ಕ್ಯಾಲ್ಕುಲೇಟರ್ ಸೇರಿದಂತೆ ಮುಂತಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ತರುವುದು ಹಾಗೂ ಬಳಸುವುದು ನಿಷೇಧಿಸಿದ್ದಾರೆ.
ಅಲ್ಲದೆ, ಪರೀಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶದಲ್ಲಿ ಬೆಳಗ್ಗೆ 9 ರಿಂದ ಪರೀಕ್ಷೆ ಮುಕ್ತಾಯವಾಗುವವರೆಗೆ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್, ಇಂಟರ್ನೆಟ್, ಸೈಬರ್ ಕೆಫೆ ಹಾಗೂ ಕೋಚಿಂಗ್ ಕೇಂದ್ರಗಳು ತೆರೆಯದಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.