ಜಿಲ್ಲೆ

ಆರ್ಥಿಕ ಗಣತಿ ಮೊಬೈಲ್ ಆ್ಯಪ್ ಬಿಡುಗಡೆ

Kodagu


ಮಡಿಕೇರಿ: ಕೇಂದ್ರ ಸರ್ಕಾರದ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಇಲಾಖೆಯ 7ನೇ ಆರ್ಥಿಕ ಗಣತಿ ಡಿಜಿಟಲ್ ಇಂಡಿಯಾ ಕಾರ್ಯಕ್ರಮದಡಿ ಮೊಬೈಲ್ ಆ್ಯಪ್ ಮೂಲಕ ಮಾಹಿತಿ ಸಂಗ್ರಹಿಸುವ ಸಂಬಂಧ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಸಭೆಯಲ್ಲಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮೊಬೈಲ್ ಆ್ಯಪ್ ಬಿಡುಗಡೆ ಮಾಡಿದರು.
ಬಳಿಕ ಮಾತನಾಡಿದ ಅವರು, ಗಣತಿಯು 3 ತಿಂಗಳು ನಡೆಯಲಿದೆ. ಪ್ರತಿ ಕಟ್ಟಡಕ್ಕೆ ಸಮೀಕ್ಷಾಗಾರರು ಭೇಟಿ ನೀಡಿ ಗಣತಿ ಮಾಡಲಿದ್ದಾರೆ. ಇದುವರೆಗೆ 25 ಮೇಲ್ವಿಚಾರಕರು ಹಾಗೂ 86 ಗಣತಿದಾರರನ್ನು ನೇಮಕಾತಿ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಎಂ.ಪ್ರಕಾಶ್, ಸಹಾಯಕ ಸಾಂಖ್ಯಿಕ ಅಧಿಕಾರಿ ಟಿ.ವೆಂಕಟೇಶ್, ಸಿ.ಎಸ್.ಸಿ. ಸಂಸ್ಥೆಯ ವ್ಯವಸ್ಥಾಪಕ ಮಹೇಶ್ ಇತರರು ಇದ್ದರು.