ಕುಷ್ಟಗಿಯ ವಿವಿಧ ರಸಗೊಬ್ಬರ ಅಂಗಡಿಗಳಿಗೆ ಶನಿವಾರ ಭೇಟಿ ನೀಡಿದ ಡಿಸಿ ಸುರೇಶ ಬಿ. ಇಟ್ನಾಳ, ರೈತರೊಂದಿಗೆ ಸಮಾಲೋಚನೆ ನಡೆಸಿದರು. ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ ಇತರರಿದ್ದರು.  
ಜಿಲ್ಲೆ

ಯೂರಿಯಾ ಬಳಕೆ ಕಡಿಮೆ ಮಾಡಿ

ಕುರುವತ್ತಿ ಶ್ರೀಕಾಂತಪ್ಪ

ಕುಷ್ಟಗಿ: ಯೂರಿಯಾ ರಸಗೊಬ್ಬರ ಬಳಕೆ ಕಡಿಮೆ ಮಾಡಿ ಎಂದು ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ರೈತರಿಗೆ ಸಲಹೆ ನೀಡಿದರು.

ಪಟ್ಟಣದ ವಿವಿಧ ಆಗ್ರೋ ಕೇಂದ್ರಗಳಿಗೆ ಶನಿವಾರ ಭೇಟಿ ನೀಡಿ ರಸಗೊಬ್ಬರ ಪೂರೈಕೆ ಪರಿಶೀಲಿಸಿ ರೈತರೊಂದಿಗೆ ಸಮಾಲೋಚಿಸಿದರು.

ಯೂರಿಯಾ ರಸಗೊಬ್ಬರದ ಅತಿ ಹೆಚ್ಚು ಬಳಕೆಯಿಂದ ಮಣ್ಣಿನ ಫಲವತ್ತತೆ ಕಡಿಮೆಯಾಗಿ ಬೆಳೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತದೆ. ಜಾನುವಾರು ಸಾಕಣೆ ಮಾಡಿದರೆ ಆದಾಯದ ಜತೆಗೆ ಜಮೀನಿಗೆ ಸಾವಯವ ಗೊಬ್ಬರವೂ ಲಭ್ಯವಾಗುತ್ತದೆ ಎಂದರು.

ಯೋಜನೆ ಪ್ರಕಾರ ರೈತರಿಗೆ ರಸಗೊಬ್ಬರ ಮಾರಾಟ ಮಾಡಬೇಕು ಎಂದು ರಸಗೊಬ್ಬರ ಅಂಗಡಿಗಳ ಮಾಲೀಕರಿಗೆ ಸೂಚಿಸಿದ ಜಿಲ್ಲಾಧಿಕಾರಿ, ಕೊಪ್ಪಳ ಜಿಲ್ಲೆಯಲ್ಲಿ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಕೆಯಾಗುತ್ತಿದ್ದು, ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದರು. ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ ಇದ್ದರು.