ರಾಯಚೂರು: ಲೋಕಸಭೆ ಚುನಾವಣೆಯ ಮತ ಎಣಿಕೆಯ ನಡೆಯಲಿರುವ ನಗರದ ಎಸ್‌ಆರ್‌ಪಿಎಸ್ ಪದವಿಪೂರ್ವ ಕಾಲೇಜಿನಲ್ಲಿನ ಮತ ಎಣಿಕೆ ನಡೆಯಲಿರುವ ಕೊಠಡಿಗಳಿಗೆ ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜೂ.4ರಂದು ನಡೆಯಲಿರುವ ಮತ ಎಣಿಕೆ ಕಾರ್ಯದಲ್ಲಿ ಯಾವುದೇ ಲೋಪದೋಷ ನಡೆಯದಂತೆ ನೋಡಿಕೊಳ್ಳಬೇಕು. ಮತ ಎಣಿಕೆ ಸಿಬ್ಬಂದಿ ಹಾಗೂ ಸಂಬಂಧಿಸಿದ ಅಧಿಕಾರಿಗಳನ್ನು ಬಿಟ್ಟು ಮತ ಎಣಿಕೆ ಕೇಂದ್ರದೊಳಗೆ ಇತರರಿಗ ಪ್ರವೇಶ ನೀಡಬಾರದು.
ಮತ ಎಣಿಕೆ ಸಿಬ್ಬಂದಿ, ರಾಜಕೀಯ ಪಕ್ಷಗಳ ಏಜೆಂಟ್‌ರು, ಪೊಲೀಸ್ ಸಿಬ್ಬಂದಿಗಳಿಗೆ ಸಮರ್ಪಕ ಕುಡಿಯುವ ನೀರು, ಊಟದ ವ್ಯವಸ್ಥೆ ಮಾಡಬೇಕು. ಮಾಧ್ಯಮ ಪ್ರತಿನಿಗಳ ಕೊಠಡಿಯಲ್ಲಿ ಎಲ್‌ವಿಡಿ ಪರದೆ, ಇಂಟರ್‌ನೆಟ್ ವ್ಯವಸ್ಥೆಯನ್ನು ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಡಿ, ಸಹಾಯಕ ಆಯುಕ್ತ ಎಸ್.ಎಸ್.ಸಂಪಗಾವಿ, ನಗರಸಭೆ ಪೌರಾಯುಕ್ತ ಜಿ.ಎನ್.ಚಲಪತಿ ಹಾಗೂ ಅಕಾರಿಗಳು ಉಪಸ್ಥಿತರಿದ್ದರು.