ಗದಗ: ಜಿಲ್ಲೆಯಲ್ಲಿ ಜುಲೈ ೮ ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಂಡಿದ್ದು ಸಾರ್ವಜನಿಕರು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜೀ ಸಂಧಾನ ಮಾಡಿಕೊಳ್ಳುವ ಮೂಲಕ ತಮ್ಮ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಸವರಾಜ ಅವರು ತಿಳಿಸಿದರು.
ಜಿಲ್ಲಾ ನ್ಯಾಯಾಲಯದ ವಿಡಿಯೋ ಕಾನ್ಪರನ್ಸ ಹಾಲ್‌ನಲ್ಲಿ ಬುಧವಾರ ಏರ್ಪಡಿಸಲಾಗಿದ್ದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯ ನವದೆಹಲಿ, ಕರ್ನಾಟಕ ಉಚ್ಛ ನ್ಯಾಯಾಲಯ, ಬೆಂಗಳೂರು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಇವರ ಆದೇಶದನ್ವಯ ಈ ರಾಷ್ಟ್ರೀಯ ಲೋಕ ಅದಾಲತ್ ಏರ್ಪಡಿಸಲಾಗುತ್ತಿದೆ.
ರಾಜೀ ಸಂಧಾನದಲ್ಲಿ ಪಾಲ್ಗೊಂಡು ತಮಗಾಗುವ ಆರ್ಥಿಕ ಹೊರೆ ಹಾಗೂ ಸಮಯ ಪೋಲಾಗುವುದನ್ನು ತಪ್ಪಿಸಲು, ಮತ್ತು ರಾಜಿ ಸಂಧಾನದಲ್ಲಿ ಪ್ರಕರಣ ಇತ್ಯರ್ಥವಾದರೆ ನ್ಯಾಯಾಲಯಕ್ಕೆ ತುಂಬಿದ ಶುಲ್ಕವನ್ನು ಸಂಪೂರ್ಣ ಮರುಪಾವತಿ ಮಾಡಲಾಗುವುದು ಹಾಗೂ ಪ್ರಕರಣ ರಾಜೀ ಆದಲ್ಲಿ ಉಭಯ ಪಕ್ಷಗಾರರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿರುವುದಿಲ್ಲ ಇಲ್ಲಿಗೆ ಪ್ರಕರಣ ಮುಕ್ತಾಯಗೊಂಡು ತಮ್ಮ ಮೊದಲಿನ ಬಾಂದsವ್ಯ ಉಳಿಸಿಕೊಳ್ಳಲು ಸಹಾಯಕವಾಗುತ್ತದೆ ಎಂದರು.
ಗದಗ ಜಿಲ್ಲೆಯಲ್ಲಿ ರಾಜೀ ಸಂಧಾನಕ್ಕಾಗಿ ಪ್ರತಿಯೊಂದು ನ್ಯಾಯಾಲಯಕ್ಕೆ ಒಂದು ಬೆಂಚಿನಂತೆ ಒಟ್ಟು ೧೫ ಬೆಂಚಗಳನ್ನು ರಚಿಸಿದ್ದು ಜಿಲ್ಲೆಯಲ್ಲಿ ಒಟ್ಟು ೧೯೪೦೭ ವಿವಿಧ ಚಾಲ್ತಿ ಪ್ರಕರಣಗಳಿದ್ದು ಅದರಲ್ಲಿ ಈಗಾಗಲೇ ರಾಜೀ ಆಗಬಹುದಾದ ೨೮೫೦ ಪ್ರಕರಣಗಳನ್ನು ಗುರುತಿಸಲಾಗಿದೆ. ಇದರಲ್ಲಿ ಸಿವಿಲ್ ದಾವೆಗಳಾದ ಜಮೀನುಗಳಿಗೆ ಸಂಬಂಧಪಟ್ಟ ವ್ಯಾಜ್ಯಗಳು ಮನೆ ಹಾಗೂ ನಿವೇಶನಗಳಿಗೆ ಸಂಬಂಧಪಟ್ಟ ವ್ಯಾಜ್ಯಗಳು, ಬsಸ್ವಾಧೀನ ಪ್ರಕರಣಗಳು, ಬ್ಯಾಂಕ ವಸೂಲಾತಿ ಪ್ರಕರಣಗಳು, ದರಖಾಸ್ತು ಅರ್ಜಿಗಳು, ಕಾರ್ಮಿಕ ಪ್ರಕರಣಗಳು, ಮರಳು ಕಳ್ಳ ಸಾಗಾಣಿಕೆ ಪ್ರಕರಣಗಳು, ಚೆಕ್‌ಬೌನ್ಸ್ ಪ್ರಕರಣಗಳು, ಮೋಟರ್ ವಾಹನ ಅಪಘಾತ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಹಾಗೂ ರಾಜೀ ಆಗಲು ಅರ್ಹವಿರುವ ಕ್ರಿಮಿನಲ್ ಕಂಪೌಂಡೆಬಲ್ ಪ್ರಕರಣಗಳು ಸೇರಿದಂತೆ ಹಲವಾರು ಪ್ರಕರಣಗಳನ್ನು ರಾಜೀಗಾಗಿ ಗುರುತಿಸಲಾಗಿರುತ್ತದೆ.
ಪ್ರತಿದಿನ ರಾಜೀಗಾಗಿ ಆಯ್ಕೆ ಮಾಡಿದ ಪ್ರಕರಣಗಳನ್ನು ಸಂಬಂದsಪಟ್ಟ ವಕೀಲರು ಹಾಗೂ ಪಕ್ಷಗಾರರೊಂದಿಗೆ ಮುಂಚಿತವಾಗಿಯೇ ರಾಜೀ ಸಂಧಾನದಿಂದ ಆಗುವ ಪ್ರಯೋಜನಗಳ ಬಗ್ಗೆ ತಿಳಿಸಿ ಅವರ ಮನ ಒಲಿಸಿ ರಾಜೀ ಸಂಧಾನ ಮಾಡಿಕೊಳ್ಳಲು ತಿಳಿಯಪಡಿಸಲಾಗುವುದು, ಈಗಾಗಲೇ ಸಂಬಂಧಪಟ್ಟ ಇಲಾಖೆಯ ಹಾಗೂ ನಿಗಮ ಮಂಡಳಿಗಳ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ಜರುಗಿಸಿ ಹೆಚ್ಚಿನ ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥ ಪಡಿಸಿಕೊಳ್ಳಲು ತಿಳಿಯಪಡಿಸಿದೆ. ಪ್ರಕರಣಗಳಿಗೆ ಸಂಬಂದsಪಟ್ಟ ವಕೀಲರು, ಕಕ್ಷಿದಾರರು ಹಾಗೂ ವಿವಿದs ಇಲಾಖೆಗಳಿಗೆ ಸಂಬಂದsಪಟ್ಟ ಅಧಿಕಾರಿಗಳು, ಇಲಾಖೆಗಳವರು ಜುಲೈ ೮ ರಂದು ಜರಗುವ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಪಾಲ್ಗೊಂಡು ತಮ್ಮ ವ್ಯಾಜ್ಯಗಳನ್ನು ರಾಜೀ ಸಂಧಾನ ಮೂಲಕ ಪರಿಹರಿಸಿಕೊಳ್ಳಲು ಇದೊಂದು ಉತ್ತಮ ಸದಾವಕಾಶವಾಗಿದೆ ಎಂದು ಹೇಳಿದರು.
ಕಳೆದ ಫೆಬ್ರುವರಿಯಲ್ಲಿ ಜರುಗಿದ ಲೋಕ ಅದಾಲತ್‌ನಲ್ಲಿ ೧೮೯೫ ಚಾಲ್ತಿ ಪ್ರಕರಣಗಳನ್ನು, ೮೭೨೪ ವ್ಯಾಜ್ಯಪೂರ್ವ ಪ್ರಕರಣಗಳನ್ನು ಸೇರಿ ಒಟ್ಟು ೧೦೬೧೯ ಪ್ರಕರಣಗಳ್ನು ರಾಜಿ ಮೂಲಕ ಇತ್ಯರ್ಥಪಡಿಸಿದೆ. ಇದರಲ್ಲಿ ವಿಶೇಷವಾಗಿ ೧೩ ಕೌಟುಂಬಿಕ ಪ್ರಕರಣಗಳನ್ನು ಪುನಃ ಒಂದುಗೂಡಿಸಿ ಕಳುಹಿಸಲಾಗಿದೆ ಎಂದರು. ಪಕ್ಷಗಾರರು ನ್ಯಾಯಾಲಯಗಳಲ್ಲಿರುವ ತಮ್ಮ ವ್ಯಾಜ್ಯಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ ಎಂದು ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಸವರಾಜ ಅವರು ಕೋರಿದರು.
ಪತ್ರಿಕಾ ಗೋಷ್ಠಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಕೆ.ಗುರುಪ್ರಸಾದ ಹಾಗೂ ವಾರ್ತಾಧಿಕಾರಿ ವಸಂತ ಮಡ್ಲೂರ ಅವರು ಉಪಸ್ಥಿತರಿದ್ದರು.