ಗದಗ: ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಶ್ರೀ ಭಗೀರಥರ ಅವರ ಜಯಂತಿಯನ್ನು ಮಂಗಳವಾರ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‍ದಲ್ಲಿ ಸರಳ ಹಾಗೂ ಸಾಂಕೇತಿಕವಾಗಿ ಪೂಜೆ ಮತ್ತು ಪುಷ್ಪಾರ್ಚನೆ ಸಲ್ಲಿಸುವುದರ ಮೂಲಕ ಆಚರಿಸಲಾಯಿತು. ಅಪರ ಜಿಲ್ಲಾಧಿಕಾರಿ ಸುರೇಖಾ ಅವರು ಶ್ರೀ ಭಗೀರಥರ ಅವರ ಭಾವಚಿತ್ರಕ್ಕೆ ಪೂಜೆಯೊಂದಿಗೆ ಪುಷ್ಪಾರ್ಚಣೆ ಸಲ್ಲಿಸಿ ಗೌರವಿಸಿ ನಮಿಸಿದರು. ಈ ಸಂದರ್ಭದಲ್ಲಿ ಸಮಾಜದ ಮುಖಂಡರು, ಗಣ್ಯರು, ಹಿರಿಯ ನಾಗರಿಕರು, ಸಾರ್ವಜನಿಕರು ಉಪಸ್ಥಿತರಿದ್ದರು