ಮಂಡ್ಯ: ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದಂತೆ ಕಾರ್ಯಯೋಜನೆ ರೂಪಿಸಬೇಕು. ಅಂತೆಯೇ 2023-24 ನೇ ಸಾಲಿನ ಅನುದಾನ ನಿಗದಿಯಾಗಿರುತ್ತದೆ. ಆದ್ದರಿಂದ ತಮ್ಮ ಕರ್ತವ್ಯಗಳನ್ನು ಪಾರದರ್ಶಕವಾಗಿ ನಿರ್ವಹಿಸಿ ಎಂದು ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿಯೂ ಆದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಪಿ.ಸಿ.ಜಾಫರ್ ಸೂಚಿಸಿದರು.
ಬೆಂಗಳೂರಿನಿಂದ ಬುಧವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಆಯೋಜಿಸಿದ್ದ ಜಿಪಂ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಇಲಾಖೆಯ ಮುಖ್ಯಸ್ಥರು ಕಾಮಗಾರಿಗಳನ್ನು ನಡೆಸುವಾಗ ಸರ್ಕಾರದ ನಿಯಮಗಳನ್ನು ಪಾಲಿಸಬೇಕು. ಜಿಪಂ ಅನುದಾನದ ಟೆಂಡರ್ ಮಾಡುವಾಗ ಕಡತಗಳನ್ನು ಉಪಕಾರ್ಯದರ್ಶಿಗಳಿಂದ ಅನುಮೋದನೆ ಪಡೆಯಬೇಕು. ಜಿಲ್ಲೆಯಲ್ಲಿ ಕಡಿಮೆ ಅನುದಾನದಿಂದ ಕೆಲವು ಸಣ್ಣ ದುರಸ್ತಿ ಕಾಮಗಾರಿ, ಯೋಜನೆ ಕೈಗೊಂಡರೆ ಸಾರ್ವಜನಿಕರಿಗೆ ಹೆಚ್ಚು ಉಪಯುಕ್ತತೆಯಾಗುವ ಸಾಧ್ಯತೆ ಇರುತ್ತದೆ. ಅವುಗಳನ್ನು ಪಟ್ಟಿ ಮಾಡಿ ಚರ್ಚಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್, ಉಪಕಾರ್ಯದರ್ಶಿಗಳಾದ ಸಂಜೀವಪ್ಪ, ಬಾಬು, ಮುಖ್ಯಯೋಜನಾಧಿಕಾರಿ ಧನುಷ್ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.