ಬೆಳ್ತಂಗಡಿ: ಉಜಿರೆ ಎಸ್‌ಡಿಎಂ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಆಯೋಜಿಸಿದ್ದ ಜಿಲ್ಲಾ ಇಂಟರ‌್ಯಾಕ್ಟ್ ಕಾನ್ಫರೆನ್ಸ್ ‘ಯೂತ್ ಕಾರ್ನಿವಲ್’ ಕಾರ್ಯಕ್ರಮದಲ್ಲಿ ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿಬಿಎಸ್‌ಇ)ಶಾಲೆಯ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಗಳಿಸಿದ್ದಾರೆ.
ಸಮೂಹ ನೃತ್ಯ ಪ್ರಥಮ, ಗಾಯನ ಪ್ರಥಮ, ಛದ್ಮವೇಷ ದ್ವಿತೀಯ, ಭಾಷಣದಲ್ಲಿ ತೃತೀಯ ಸ್ಥಾನವನ್ನು ಪಡೆದಿದ್ದಾರೆ. ಸ್ಪರ್ಧೆಯಲ್ಲಿ ಭಾಗವಹಿಸಿದ ಹಾಗೂ ವಿಜೇತ ವಿದ್ಯಾರ್ಥಿಗಳನ್ನು ಶಾಲಾ ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದ ಅಭಿನಂದಿಸಿದ್ದಾರೆ.