ಕೊಪ್ಪಳ: ವಿವಿಧ ವಸತಿ ಶಾಲೆಗಳಲ್ಲಿನ 6ನೇ ತರಗತಿ ಪ್ರವೇಶ ಪರೀಕ್ಷೆಗಳು ಫೆ.15 ರಂದು ಮಧ್ಯಾಹ್ನ 2.30 ರಿಂದ ಸಂಜೆ 4.30 ಗಂಟೆಯವರೆಗೆ ಜಿಲ್ಲೆಯ 44 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಡಿಸಿ ನಲಿನ್ ಅತುಲ್ ಆದೇಶಿಸಿದ್ದಾರೆ.
ಪ್ರವೇಶ ಪತ್ರ ಹೊಂದಿದ ಅಭ್ಯರ್ಥಿಗಳು ಹಾಗೂ ನಿಯೋಜಿತ ಶಿಕ್ಷಕರನ್ನು, ಜಾಗೃತ ದಳದವರನ್ನು ಹೊರತುಪಡಿಸಿ ಇನ್ನೂಳಿದವರಿಗೆ ಪರವಾನಿಗೆ ಇಲ್ಲದೇ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಇರುವುದಿಲ್ಲವೆಂದು ತಿಳಿಸಿದ್ದಾರೆ.