ಜಿಲ್ಲೆ

ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನ ಸ್ವೀಕಾರ

Kopala - Raveendra V K

ಕೊಪ್ಪಳ: ರಾಷ್ಟ್ರೀಯ ಐಕ್ಯತಾ ಸಪ್ತಾಹ ಕಾರ್ಯಕ್ರಮ ಅಂಗವಾಗಿ ನಗರ ಡಿಸಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಅಧಿಕಾರಿಗಳು ರಾಷ್ಟ್ರೀಯ ಐಕ್ಯತಾ ಪ್ರಮಾಣವಚನ ಸ್ವೀಕರಿಸಿದರು.

ನ.19ರಿಂದ 25ವರೆಗೆ ರಾಷ್ಟ್ರೀಯ ಐಕ್ಯತಾ ಸಪ್ತಾಹ ಆಚರಣೆಗೆ ಸರ್ಕಾರ ನಿರ್ಧರಿಸಿದೆ. ರಾಷ್ಟ್ರೀಯ ಸ್ವಾತಂತ್ರ$್ಯ, ಐಕ್ಯತೆ ಬಲಪಡಿಸಲು, ದೇಶದಲ್ಲಿ ಹೆಚ್ಚುತ್ತಿರುವ ಹಿಂಸಾಚಾರ ಮತ್ತು ಕೋಮು ದ್ವೇಷ ತಡೆಗೆ ಸಪ್ತಾಹ ಹಮ್ಮಿಕೊಳ್ಳಲಾಗಿದೆ. ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ನೇತೃತ್ವದಲ್ಲಿ ಅಧಿಕಾರಿಗಳು ಪ್ರಮಾಣವಚನ ಸ್ವೀಕರಿಸಿದರು. ಜಿಲ್ಲಾ ತರಬೇತಿ ಸಂಸ್ಥೆ ಪ್ರಾಚಾರ್ಯ ಕೃಷ್ಣಮೂರ್ತಿ ದೇಸಾಯಿ ಪ್ರಮಾಣವಚನ ಬೋಧಿಸಿದರು. ಜಿಪಂ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್​., ಪ್ರಾದೇಶಿಕ ಸಾರಿಗೆ ಅಧಿಕಾರಿ ಎಲ್​.ಬಿ.ನಾಲವಾರ, ಜಿಲ್ಲಾ ಕಾರ್ಮಿಕ ಅಧಿಕಾರಿ ಸುಧಾ ಗರಗ ಇತರ ಅಧಿಕಾರಿಗಳಿದ್ದರು.