ಕೊಪ್ಪಳ: 2025-&26 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ, ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆಯಡಿ ರೈತರು ಪಪ್ಪಾಯ, ಮಾವು, ದ್ರಾಕ್ಷಿ, ದಾಳಿಂಬೆ, ಹಸಿಮೆಣಸಿನಕಾಯಿ ಮತ್ತು ಈರುಳ್ಳಿ(ನೀ), ಟೊಮ್ಯಾಟೋ, ಈರುಳ್ಳಿ(ಮ.ಆ) ವಿಮೆಗೆ ಒಳಪಡಿಸಬಹುದು. ರೈತರು ತಮ್ಮ ಪಾಲಿನ ವಿಮಾ ವಂತಿಗೆಯನ್ನು ಜುಲೈ 31 ರೊಳಗೆ ಪಾವತಿಸಲು ಈ ಯೋಜನೆಯಡಿ ಪ್ರಯೋಜನ ಪಡೆಯಬಹುದು. ಇದಕ್ಕಾಗಿ ಅಗ್ರಿಕಲ್ಚರ್ ಇನ್ಸೂರೆನ್ಸ್ ಕಂಪೆನಿ ಹಾಗೂ ಟಾಟಾ ಎಐಜಿ ಕಂಪನಿ ಆಯ್ಕೆ ಮಾಡಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್.ತಿಳಿಸಿದ್ದಾರೆ.