ಕೊಪ್ಪಳ: ಬಾಲ ಕಾರ್ಮಿಕ ಪದ್ಧತಿ ನಿಮೂರ್ಲನೆಗೆ ಒಂದು ಹೆಜ್ಜೆ ಅಭಿಯಾನ ಅಂಗವಾಗಿ ಮಂಗಳವಾರ ನಗರದ ನ್ಯಾಯಾಲಯ ಆವರಣದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಮಹಾಂತೇಶ ಎಸ್. ದರಗದ ಆಟೋ ಜಾಥಾಕ್ಕೆ ಚಾಲನೆ ನೀಡಿದರು.
ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ ನಿರ್ದೇಶನದಂತೆ ಬಾಲಕಾರ್ಮಿಕ, ಕಿಶೋರ ಕಾರ್ಮಿಕ ತಪಾಸಣೆ ಹಾಗೂ ಹಠಾತ್ ದಾಳಿ ನಡೆಸಲು ಸೂಚಿಸಲಾಗಿದೆ. ಅದರ ಅಂಗವಾಗಿ ಆಟೋ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕ ಬಸವರಾಜ ಹಿರೇಗೌಡರ್ ಹೇಳಿದರು. ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ತಪಾಸಣೆ ನಡೆಸಲಾಯಿತು. 18 ವರ್ಷದೊಳಗಿನ ಮಕ್ಕಳನ್ನು ದುಡಿಸಿಕೊಳ್ಳದಂತೆ ಜಾಗೃತಿ ಮೂಡಿಸಲಾಯಿತು.
ವಕೀಲರ ಸಂದ ಜಿಲ್ಲಾಧ್ಯಕ್ಷ ಎ.ವಿ.ಕಣವಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಸುಧಾ ಗರಗ, ಕಾರ್ಮಿಕ ನಿರೀಕ್ಷಕ ಶಿವಶಂಕರ್ ತಳವಾರ ಇತರರಿದ್ದರು.