ಕೊಪ್ಪಳ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸತಿ ಇಲಾಖೆಯಿಂದ ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ್ ಅವರ 117ನೇ ಜನ್ಮದಿನ ಆಚರಿಸಲಾಯಿತು.
ಲೋಕಸಭೆ ಚುನಾವಣೆ ಮಾದರಿ ನೀತಿ ಸಂಹಿತೆ ಅಂಗವಾಗಿ ಸರಳ ಕಾರ್ಯಕ್ರಮ ನೆರವೇರಿಸಲಾಯಿತು. ಜಿಲ್ಲಾಧಿಕಾರಿ ನಲಿನ್ ಅತುಲ್ ಬಾಬು ಜಗಜೀವನರಾಮ್ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು. ಎಡಿಸಿ ಸಾವಿತ್ರಿ ಕಡಿ, ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್., ಡಿಯುಡಿಸಿ ಪಿಡಿ ರೇಷ್ಮಾ ಹಾನಗಲ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ರಾಜು ತಳವಾರ, ಡಿಡಿಪಿಐ ಶ್ರೀಶೈಲ ಬಿರಾದಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ತಿಪ್ಪಣ್ಣ ಸಿರಸಗಿ, ಡಿಸಿ ಕಚೇರಿ ಸಿಬ್ಬಂದಿ ಇದ್ದರು.