ಬಸವರಾಜ ರಾಯರಡ್ಡಿ 
ಜಿಲ್ಲೆ

ಸಿಎಂ ಆರ್ಥಿಕ ಸಲಹೆಗಾರರಾಗಿ ರಾಯರಡ್ಡಿ ನೇಮಕ

DISTRICT KOPPAL BASAVARAJ RAYARADDI APPOINT AS FINANCIAL ADVISER OF CM SIDDARAMMAYYA

ಕೊಪ್ಪಳ:ಮುಖ್ಯಮಂತ್ರಿ ಸಿದ್ದರಾಮಯ್ಯ ಆರ್ಥಿಕ ಸಲಹೆಗಾರರಾಗಿ ಯಲಬುರ್ಗಾ ಶಾಸಕ ಬಸವರಾಜ ರಾಯರಡ್ಡಿಯನ್ನು ನೇಮಿಸಿ ಸರ್ಕಾರ ಶುಕ್ರವಾರ ಆದೇಶಿಸಿದೆ.

ಜಿಲ್ಲೆಯ ಹಿರಿಯ ಶಾಸಕರಾಗಿದ್ದರೂ ಮಂತ್ರಿ ಮಂಡಲದಲ್ಲಿ ಸ್ಥಾನ ಲಭಿಸಿರಲಿಲ್ಲ. ಸದ್ಯದ ರಾಜಕಾರಣದಲ್ಲಿ ಪ್ರಾಮಾಣಿಕತೆ ಉಳಿದಿಲ್ಲ. ಭ್ರಷ್ಟಾಚಾರ ಹೆಚ್ಚಿದೆ ಎಂದೆಲ್ಲ ಅವಕಾಶ ಸಿಕ್ಕಾಗಲೆಲ್ಲ ಅಸಮಾಧಾನ ತೋಡಿಕೊಳ್ಳುತ್ತಿದ್ದರು.

ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳಾಗುತ್ತಿಲ್ಲವೆಂದು ಮಂತ್ರಿಗಳು, ಅಧಿಕಾರಿಗಳ ವಿರುದ್ಧ ಸಿಎಂಗೆ ಪತ್ರ ಬರೆವ ಮೂಲಕ ಮುನಿಸು ಹೊರ ಹಾಕಿದ್ದರು. ಸದ್ಯ ರಾಯರಡ್ಡಿಯನ್ನು ಆರ್ಥಿಕ ಸಲಹೆಗಾರರನ್ನಾಗಿ ನೇಮಿಸಿ ಸಂಪುಟ ದರ್ಜೆ ಸ್ಥಾನಮಾನ ನೀಡುವ ಮೂಲಕ ಸಿಎಂ ಸಿದ್ದರಾಮಯ್ಯ ಅಸಮಾಧಾನ ತಣಿಸುವ ಕೆಲಸ ಮಾಡಿದ್ದಾರೆ.