ಜಿಲ್ಲೆ

ಪ್ರಾಯೋಗಿಕ ತರಬೇತಿಗೆ ಅರ್ಜಿ ಆಹ್ವಾನ

Kopala - Raveendra V K

ಕೊಪ್ಪಳ: ಭೋವಿ ಅಭಿವೃದ್ಧಿ ನಿಗಮದಿಂದ ಎಲೆಕ್ಟ್ರಾನಿಕ್​ ಪತ್ರಿಕೋದ್ಯಮದ ವಿಷಯದಲ್ಲಿ ಪ್ರಾಯೋಗಿಕ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಪ್ಲೋಮಾ ಪೂರ್ಣಗೊಳಿಸಿದ ಭೋವಿ ಸಮುದಾಯ ಅಭ್ಯರ್ಥಿಗಳಿಗೆ ವಸತಿ ಸಹಿತ 60 ದಿನಗಳ ಕಾಲ ತರಬೇತಿ ನೀಡಲಾಗುವುದು. ಆಸಕ್ತರು ಖುದ್ದಾಗಿ ನಿಗಮದ ಜಿಲ್ಲಾ ಕಚೇರಿ ಸಂಪರ್ಕಿಸಿ ಡಿ.20ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.