ಕೊಪ್ಪಳ: ಪ್ರಸಕ್ತ ಬಜೆಟ್ನಲ್ಲಿ ಕೃಷಿಕರು, ಕಾರ್ಮಿಕರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಎನ್ಎಚ್ಎಂ ನೌಕರರು ಸೇರಿದಂತೆ ಶ್ರಮಿಕ ವರ್ಗಗಳನ್ನು ಕಡೆಗಣಿಸಲಾಗಿದೆ ಎಂದು ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ನವೀನ ಗುಳಗಣ್ಣವರ್ ಆರೋಪಿಸಿದ್ದಾರೆ.
ಅಧಿಕಾರಕ್ಕೆ ಬರುವ ಮುನ್ನ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಯಾವುದೇ ಅಂಶಗಳನ್ನು ಬಜೆಟ್ ನಲ್ಲಿ ಕಾರ್ಯಗತಗೊಳಿಸಲು ಯಾವುದೇ ಹೊಸ ಭರವಸೆಯ ಹೆಜ್ಜೆ ಇಡದೇ ಕೊಟ್ಟ ಮಾತು ತಪ್ಪಿದ ಜನ ವಿರೋಧಿ ಬಜೆಟ್ ಸಿದ್ದರಾಮಯ್ಯನವರು ಮಂಡಿಸಿದ್ದಾರೆ.
ಬಜೆಟ್ ನಲ್ಲಿ ಘೋಷಿಸಿರುವ ಯೋಜನೆಗಳು ಕೇವಲ ಕಾಗದದಲ್ಲೇ ಉಳಿಯುವ ಸಾಧ್ಯತೆ ಗೋಚರವಾಗುತ್ತಿದೆ. 'ಹೇಳುವುದು ಒಂದು ಮಾಡುವುದು ಇನ್ನೊಂದು' ಎಂಬಂತೆ ಈ ಬಜೆಟ್ ಆಗಬಾರದು, ಕಳೆದ ಬಜೆಟ್ ನಲ್ಲಿ ಘೋಫಿಣೆಯಾಗಿದ್ದವೆಲ್ಲವೂ ಘೋಫಿಣೆಯಾಗಿಯೇ ಉಳಿದಿದೆ, ಈ ಬಜೆಟ್ ಗೂ ಅದೇ ಗತಿ ಆಗುವ ಸಾಧ್ಯತೆಯೇ ಹೆಚ್ಚು ಎನ್ನುವುದು ರಾಜ್ಯದ ದಯನೀಯ ಆರ್ಥಿಕ ಪರಿಸ್ಥಿತಿ ಹೇಳುತ್ತಿದೆ ಎಂದಿದ್ದಾರೆ.