ಕೊಪ್ಪಳ: ಮಿಷನ್ ವಾತ್ಸಲ್ಯ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಮಕ್ಕಳ ಸಹಾಯವಾಣಿ&1098 ಪರಿಷತ ಲಾಂಛನವನ್ನು ಜಿಲ್ಲಾಧಿಕಾರಿ ಡಾ.ಸುರೇಶ ಬಿ. ಇಟ್ನಾಳ ಗುರುವಾರ ಡಿಸಿ ಕಚೇರಿ ಆವರಣದಲ್ಲಿ ಬಿಡುಗಡೆಗೊಳಿಸಿದರು.
ನಂತರ ಮಾತನಾಡಿ, ಶೈಕ್ಷಣಿಕ ಸಂಸ್ಥೆಗಳು, ಸರ್ಕಾರಿ ಕಚೇರಿ ಆವರಣ, ಬಸ್ ನಿಲ್ದಾಣ ಇನ್ನಿತರ ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಕ್ಕಳ ಸಹಾಯವಾಣಿ ಸಂಖ್ಯೆ ಬರೆಸಿ ಜಾಗೃತಿ ಮೂಡಿಸಿ ಎಂದು ಸೂಚಿಸಿದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತಸ್ವಾಮಿ ಪೂಜಾರ ಮಾತನಾಡಿ, ಮಕ್ಕಳ ಸಹಾಯವಾಣಿ ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಲಾಂಛನ ಬದಲಾಯಿಸಲಾಗಿದೆ. ಈ ಬಗ್ಗೆ ವ್ಯಾಪಕ ಪ್ರಚಾರ ಕೈಗೊಳ್ಳಲಾಗುತ್ತಿದೆ. ರಾಜ್ಯ ಮಕ್ಕಳ ರಕ್ಷಣಾ ನೀತಿ ಅನ್ವಯ ಶೈಕ್ಷಣಿಕ ಸಂಸ್ಥೆ, ವಸತಿ ನಿಲಯ, ವಸತಿ ಸಹಿತ ಶಿಕ್ಷಣ ಸಂಸ್ಥೆ, ಸರ್ಕಾರಿ ಕಚೇರಿ ಆವರಣಗಳಲ್ಲಿ ಸಹಾಯವಾಣಿ ಕುರಿತ ಬರಹ ಬರೆಸಬೇಕು. ಮಕ್ಕಳು ಸಂಕಷ್ಟಕ್ಕೆ ಸಿಲುಕಿದಾಗ ಅಥವಾ ಮಕ್ಕಳ ಹಕ್ಕುಗಳಿಗೆ ಧಕ್ಕೆಯಾದಾಗ ಸಾರ್ವಜನಿಕರು ಮಾಹಿತಿ ನೀಡಲು ಅನುಕೂಲವಾಗುತ್ತದೆ. ಮಾಹಿತಿ ನೀಡಿದ 60 ನಿಮಿಷದಲ್ಲಿ ಮಗುವನ್ನು ರಸಿ ಪುನರ್ವಸತಿ ಕಲ್ಪಿಸಲಾಗುವುದು ಎಂದರು.
ಎಸ್ಪಿ ಡಾ.ರಾಮ್ ಎಲ್.ಅರಸಿದ್ದಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಇತರ ಅಧಿಕಾರಿಗಳಿದ್ದರು.