ಕೊಪ್ಪಳ: ಸಿಎಂ ಸಿದ್ದರಾಮಯ್ಯ ಅ.6ರಂದು ಜಿಲ್ಲೆಗೆ ಆಗಮಿಸುತ್ತಿದ್ದು, ಹೆಚ್ಚಿನ ಜನ ಸೇರಲಿದ್ದಾರೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗದಂತೆ ಹಾಗೂ ಟ್ರಾಫಿಕ್ ಉಂಟಾಗದಂತೆ ಜವಾಬ್ದಾರಿ ನಿರ್ವಹಿಸಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.
ಸಿಎಂ ಕಾರ್ಯಕ್ರಮ ಹಿನ್ನೆಲೆಯಲ್ಲಿ ತಮ್ಮ ಕಚೇರಿಯಲ್ಲಿ ಸಭೆ ನಡೆಸಿ ಮಾತನಾಡಿದರು.
ನಿಮಗೆ ವಹಿಸಿದ ಜವಾಬ್ದಾರಿ ಸರಿಯಾಗಿ ನಿಭಾಯಿಸಿ. ನಮ್ಮ ಅಧಿಕಾರಿಗಳ ಜತೆಗೆ ನೆರೆ ಜಿಲ್ಲೆಗಳಿಂದ 2500 ಪೊಲೀಸರು ಆಗಮಿಸುವರು. ಅವರಿಗೆ ಸಮುದಾಯ ಭವನ ಮತ್ತು ಕಲ್ಯಾಣ ಮಂಟಪಗಳಲ್ಲಿ ವ್ಯವಸ್ಥೆ ಮಾಡಬೇಕು. ಅಧಿಕಾರಿ ಮತ್ತು ಸಿಬ್ಬಂದಿ ತಮ್ಮ ವಾಹನಗಳ ಪಾಸ್ ಪಡೆಯಲು ಗುರುತಿನ ಚೀಟಿಯೊಂದಿಗೆ ಫೋಟೋ ನೀಡುವಂತೆ ತಿಳಿಸಿದರು.
ದೊಡ್ಡ ಕಾರ್ಯಕ್ರಮ ಆಗಿರುವುದರಿಂದ ಎಲ್ಲರೂ ಜವಾಬ್ದಾರಿಯಿಂದ ಕೆಲಸ ಮಾಡಿ. ಕೇಂದ್ರ ಬಸ್ ನಿಲ್ದಾಣದಿಂದ ಕಾರ್ಯಕ್ರಮದ ಮುಖ್ಯ ವೇದಿಕೆವರೆಗೆ ರಸ್ತೆಯಲ್ಲಿ ಸಾರ್ವಜನಿಕರಿಗೆ ಪಾರ್ಕಿಂಗ್ಗೆ ಅವಕಾಶವಿಲ್ಲ. ಅಧಿಕಾರಿಗಳು ತಮ್ಮ ವಾಹನಗಳಿಗೆ ಪಾಸ್ ಪಡೆಯಬೇಕು. ಜೆಸ್ಕಾಂ, ನಗರಸಭೆ, ಪೊಲೀಸ್ ಸೇರಿ ಇತರ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ ಎಂದು ಸೂಚಿಸಿದರು.
ಸಹಾಯಕ ಆಯುಕ್ತ ಕ್ಯಾ.ಮಹೇಶ ಮಾಲಗಿತ್ತಿ, ಎಎಸ್ಪಿ ಹೇಮಂತ್ ಕುಮಾರ್, ಡಿವೈಎಸ್ಪಿಗಳಾದ ಮುತ್ತಣ್ಣ ಸವರಗೋಳ, ಸಿದ್ದಲಿಂಗಪ್ಪಗೌಡ ಪಾಟೀಲ್, ಡಿಯುಡಿಸಿ ಪಿಡಿ ಮಂಜುನಾಥ ಗುಂಡೂರ, ಕಿಮ್ಸ್ ನಿರ್ದೇಶಕ ವಿಜಯನಾಥ ಇಟಗಿ, ವಾರ್ತಾಧಿಕಾರಿ ಡಾ.ಸುರೇಶ ಜಿ., ರಾಜ್ಯ ಸರ್ಕಾರಿ ನೌಕರರ ಸಂದ ಜಿಲ್ಲಾಧ್ಯಕ್ಷ ನಾಗರಾಜ ಜುಮ್ಮನ್ನವರ ಇತರರಿದ್ದರು.