ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಚಂದ್ರಶೇಖರ ಪಾಟೀಲ್​ ಗೆದ್ದ ಹಿನ್ನೆಲೆಯಲ್ಲಿ ಕಾಂಗ್ರೆಸ್​ ಕಾರ್ಯಕರ್ತರು ಶುಕ್ರವಾರ ಕೊಪ್ಪಳದಲ್ಲಿ ಸಂಭ್ರಮ ಆಚರಿಸಿದರು. ಪ್ರಮುಖರಾದ ಕೃಷ್ಣಾ ಇಟ್ಟಂಗಿ, ಕೃಷ್ಣಾರಡ್ಡಿ ಗಲಬಿ, ಎಂ.ಕಾಟನ ಪಾಷಾ, ಅಮ್ಜದ್​ ಪಟೇಲ್​, ಗಾಳೆಪ್ಪ ಪೂಜಾರ, ನಾಸೀರ ಹುಸೇನ್​, ಜ್ಯೋತಿ ಗೊಂಡಬಾಳ ಇದ್ದರು. 
ಜಿಲ್ಲೆ

ಕಾಂಗ್ರೆಸ್​ ಆಡಳಿತಕ್ಕೆ ಜನ ಮೆಚ್ಚುಗೆ

ಕೊಪ್ಪಳ: ವಿಧಾನ ಪರಿಷತ್​ ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಚಂದ್ರಶೇಖರ ಪಾಟೀಲ್​ ಆಯ್ಕೆಯಾಗಿದ್ದಕ್ಕೆ ಜಿಲ್ಲಾ ಕಾಂಗ್ರೆಸ್​ ಪದಾಧಿಕಾರಿಗಳು ಶುಕ್ರವಾರ ನಗರದ ಅಶೋಕ ವೃತ್ತದಲ್ಲಿ ಸಂಭ್ರಮ ಆಚರಿಸಿದರು.

ರಾಜ್ಯದ ಜನತೆ ಕಾಂಗ್ರೆಸ್​ ಆಡಳಿತ ಮೆಚ್ಚಿಕೊಂಡಿದ್ದಾರೆ. ಬಿಜೆಪಿ ಸುಳ್ಳುಗಳು ಬಹಳ ದಿನ ನಡೆಯುವುದಿಲ್ಲ. ಇತ್ತೀಚೆಗೆ ಜರುಗಿದ ಲೋಕಸಭೆ ಚುನಾವಣೆಯಲ್ಲೂ ತಕ್ಕ ಉತ್ತರ ನೀಡಿದ್ದಾರೆ. ಇದೀಗ ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಚಂದ್ರಶೇಖರ ಪಾಟೀಲ ಅವರನ್ನು ಮರು ಆಯ್ಕೆ ಮಾಡಿದ್ದಾರೆ. ಉತ್ತಮ ಆಯ್ಕೆ ಮಾಡಿದ ಮತದಾರರಿಗೆ ಧನ್ಯವಾದಗಳು. ಪಕ್ಷದ ನಾಯಕರು, ಕಾರ್ಯಕರ್ತರು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದ್ದಾರೆ. ಕಾರ್ಯಕರ್ತರ ಶ್ರಮದಿಂದ ಚಂದ್ರಶೇಖರ ಪಾಟೀಲ್​ ಮರು ಆಯ್ಕೆಯಾಗಿದ್ದಾರೆ ಎಂದರು.

ಇದು ಪಕ್ಷದ ಗೆಲುವು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ, ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಸೇರಿ ಇತರ ನಾಯಕರು, ಶಾಸಕ, ಸಚಿವರು ಶ್ರಮವಹಿಸಿ ಕೆಲಸ ಮಾಡಿದ ಪರಿಣಾಮ ಚುನಾವಣೆ ಗೆಲ್ಲಲು ಸಹಕಾರಿಯಾಗಿದೆ ಎಂದು ಹರ್ಷಪಟ್ಟರು.

ಪ್ರಮುಖರಾದ ಕೃಷ್ಣಾ ಇಟ್ಟಂಗಿ, ಕೃಷ್ಣಾರಡ್ಡಿ ಗಲಬಿ, ಎಂ.ಕಾಟನ ಪಾಷಾ, ಅಮ್ಜದ್​ ಪಟೇಲ್​, ಗಾಳೆಪ್ಪ ಪೂಜಾರ, ನಾಸೀರ ಹುಸೇನ್​, ಜ್ಯೋತಿ ಗೊಂಡಬಾಳ, ಮಂಜುನಾಥ ಗೊಂಡಬಾಳ ಇತರರಿದ್ದರು.