ಕೊಪ್ಪಳ: ಸಹಕಾರಿ ಸಂಘಗಳು ಲೆಕ್ಕಪರಿಶೋಧನೆಗಾಗಿ ಲೆಕ್ಕಪರಿಶೋಧಕರ ನೇಮಕಾತಿ ಮಾಡಿಕೊಂಡಿರುವ ಮಾಹಿತಿ ಸಲ್ಲಿಸುವಂತೆ ಜಿಲ್ಲಾ ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಉಪ ನಿರ್ದೇಶಕರು ತಿಳಿಸಿದ್ದಾರೆ.
ನಿಯಗಳ ಅನ್ವಯ ಜಿಲ್ಲಾ ಉಪ ನಿರ್ದೇಶಕರ ಕಛೇರಿಗೆ ವಾರ್ಷಿಕ ಸಭೆ ಜರುಗಿಸಿದ 7 ದಿನಗಳೊಳಗಾಗಿ ಮಾಹಿತಿ ಸಲ್ಲಿಸಬೇಕಾಗಿತ್ತು. ಆದರೆ, ಬಹಳಷ್ಟು ಸಹಕಾರ ಸಂಘಗಳ ಮತ್ತು ಸೌಹಾರ್ದ ಸಹಕಾರಿಗಳ ಆಡಳಿತ ಮಂಡಳಿಗಳು ಇಲ್ಲಿಯವರೆಗೆ ಮಾಹಿತಿ ಸಲ್ಲಿಸಿಲ್ಲ.ಲೆಕ್ಕಪರಿಶೋಧಕರ ನೇಮಕಾತಿ ಬಗ್ಗೆ ಮಾಹಿತಿ ಸಲ್ಲಿಸಬೇಕು. ಮಾಹಿತಿಗೆ ದೂ.ಸಂ: 08539-225051 ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.