ಜಿಲ್ಲೆ

ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನ ಇಂದಿನಿಂದ

Kopala - Raveendra V K

ಕೊಪ್ಪಳ: ಮತದಾರರ ಪಟ್ಟಿ ಪರಿಷ್ಕರಣೆ &2025ರ ಅಂಗವಾಗಿ ಜಿಲ್ಲಾಡಳಿತದಿಂದ ನ.9ರಿಂದ 24ವರೆಗೆ 2 ಮತ್ತು 4ನೇ ಶನಿವಾರ ಹಾಗೂ ಭಾನುವಾರದಂದು 5 ವಿಧಾನಸಭಾ ಕ್ಷೇತ್ರಗಳಲ್ಲಿ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ನಲಿನ್​ ಅತುಲ್​ ತಿಳಿಸಿದ್ದಾರೆ. ಕುಷ್ಟಗಿ, ಕನಕಗಿರಿ, ಗಂಗಾವತಿ, ಯಲಬುರ್ಗಾ, ಕೊಪ್ಪಳ ಕ್ಷೇತ್ರಗಳ ಕರಡು ಮತದಾರರ ಪಟ್ಟಿಯನ್ನು ಅ.29ರಂದು ಪ್ರಕಟಿಸಲಾಗಿದೆ. ನ.9, 10, 23, 24ರಂದು ನಡೆಯಲಿದ್ದು ಬೂತ್​ಗೆ ತೆರಳಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆ, ಮಾರ್ಪಾಡು, ಬದಲಾವಣೆ ಹಾಗೂ ತೆಗೆದು ಹಾಕಲು ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬಹುದೆಂದು ತಿಳಿಸಿದ್ದಾರೆ.