ಜಿಲ್ಲೆ

ಡಿಕೆಶಿ ಸಿಎಂ ಆಗಬಾರದು, ಎಸ್​.ಆರ್​.ಹಿರೇಮಠ

Kopala - Raveendra V K

ಕೊಪ್ಪಳ: ಡಿಸಿಎಂ ಡಿ.ಕೆ.ಶಿವಕುಮಾರ್​ ಸಾಕಷ್ಟು ಭ್ರಷ್ಟಾಚಾರ ಮಾಡಿದ್ದಾರೆ. ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲದಂತವರು ಮುಖ್ಯಮಂತ್ರಿ ಆಗಬಾರದು ಎಂದು ಸಮಾಜ ಪರಿವರ್ತನ ಸಮುದಾಯ ಮುಖ್ಯಸ್ಥ ಎಸ್​.ಆರ್​. ಹಿರೇಮಠ ಹೇಳಿದರು.

ಎಸ್​.ಎಂ.ಕೃಷ್ಣ ಸಿಎಂ ಆಗಿದ್ದ ಅವಧಿಯಲ್ಲಿ ಸಚಿವರಾಗಿದ್ದ ಶಿವಕುಮಾರ್​, ಬೆನಗಾನಹಳ್ಳಿಯಲ್ಲಿ ಭೂ ಕಬಳಿಕೆ ಮಾಡಿದ್ದಾರೆ. ಕೇಂದ್ರ ಸಚಿವ ಎಚ್​.ಡಿ.ಕುಮಾರಸ್ವಾಮಿ ಕುಟುಂಬ ಕೇತನಗಾನಹಳ್ಳಿಯಲ್ಲಿ ಗೋಮಾಳ ಜಮೀನು ಖರೀದಿಸಿ ಭ್ರಷ್ಟಾಚಾರ ಮಾಡಿದ್ದಾರೆ. ಕಾಂಗ್ರೆಸ್​, ಬಿಜೆಪಿ ಹಾಗೂ ಜೆಡಿಎಸ್​ ಮೂರೂ ಪಕ್ಷಗಳು ಭ್ರಷ್ಟಾಚಾರದಲ್ಲಿ ಮುಳುಗಿವೆ. ಎಲ್ಲರೂ ಒಂದೇ. ಕೇಂದ್ರ ಸರ್ಕಾರ ಹಿಂಪಡೆದಿದ್ದ ಮೂರು ಕೃಷಿ ಕಾಯ್ದೆಗಳನ್ನು ರಾಜ್ಯ ಸರ್ಕಾರ ವಾಪಸ್​ ಪಡೆದಿಲ್ಲ. ಸರ್ಕಾರದಲ್ಲಿ ಇಚ್ಛಾಶಕ್ತಿಯ ಕೊರತೆ ಕಾಡುತ್ತಿದೆ. ವಾಪಸ್​ ಪಡೆಯದೇ ಹೋದರೆ ಸಂಯುಕ್ತ ಹೋರಾಟದಿಂದ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.