ಕೊಪ್ಪಳ: ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿಯಿಂದ ಮುನಿರಾಬಾದ್ ಕಚೇರಿ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆ ಪರಿಹರಿಸುವ ಹಿನ್ನೆಲೆಯಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆ ಮಾ.15ರಂದು ಬೆಳಗ್ಗೆ 11 ಗಂಟೆಗೆ ಮುನಿರಾಬಾದ್ ಜೆಸ್ಕಾಂ ಕಚೇರಿಯಲ್ಲಿ ಏರ್ಪಡಿಸಲಾಗಿದೆ.
ಪ್ರತಿ ತಿಂಗಳ 3ನೇ ಶನಿವಾರ ಸಭೆ ಹಮ್ಮಿಕೊಳ್ಳಲಾಗುವುದು. ಮುನಿರಾಬಾದ್, ಹುಲಿಗಿ, ಹಿಟ್ನಾಳ, ಅಗಳಕೇರಾ, ಶಿವಪುರ, ಗಿಣಿಗೇರಾ, ಹಿರೇಬಗನಾಳ, ಕುಣಿಕೇರಾ, ಕಲ್ತಾವರಗೇರಾ, ಬಂಡಿಹರ್ಲಾಪುರ, ಬೂದುಗುಂಪಾ, ಗುಳದಳ್ಳಿ, ಬೇವಿನಹಳ್ಳಿ, ಇಂದರಗಿ, ಹೊಸಳ್ಳಿ ಗ್ರಾಪಂ ಗ್ರಾಹಕರು ಸಭೆಗೆ ಹಾಜರಾಗಿ ಯಶಸ್ವಿಗೊಳಿಸುವಂತೆ ಜೆಸ್ಕಾಂ ಎಇಇ ತಿಳಿಸಿದ್ದಾರೆ.