ಜಿಲ್ಲೆ

ಮೀನುಗಾರಿಕೆ ಇಲಾಖೆಯ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

Kopala - Raveendra V K

ಕೊಪ್ಪಳ: ಮೀನುಗಾರಿಕೆ ಇಲಾಖೆಯಿಂದ 2025&-26ನೇ ಸಾಲಿಗೆ ವಿವಿಧ ಯೋಜನೆಯಡಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿಶೇಷ ಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ ಮೀನುಗಾರಿಕೆ ಸಲಕರಣೆ ಕಿಟ್​ ಮತ್ತು ರಾಜ್ಯ ವಲಯ ಯೋಜನೆಯಡಿ ಜಲಾಶಯ/ನದಿಭಾಗ/ಕೆರೆಗಳ ವ್ಯಾಪ್ತಿಯ ವೃತ್ತಿಪರ ಮೀನುಗಾರರಿಗೆ ಮೀನು ಹಿಡಿಯುವ ಬಲೆ, ಕೆರೆ/ಜಲಾಶಯಗಳ ಅಂಚಿನ ಕೊಳಗಳಲ್ಲಿ ಮೀನುಮರಿ ಪಾಲನೆಗೆ ನೆರವು, ಇಲಾಖೆ ಕೆರೆಗಳನ್ನು ಗುತ್ತಿಗೆ ಪಡೆದ ಮೀನುಗಾರರ ಸಹಕಾರ ಸಂಘ/ವ್ಯಕ್ತಿಗಳಿಗೆ ಮೀನುಮರಿ ಖರೀದಿಸಲು ನೆರವು ನೀಡಲಾಗುವುದು.

ಅರ್ಹ ಲಾನುಭವಿಗಳು ಆಯಾ ತಾಲೂಕು ಮಟ್ಟದ ಮೀನುಗಾರಿಕೆ ಸಹಾಯಕ ನಿರ್ದೇಶಕ ಕಚೇರಿಗೆ ಜೂ.30ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಮೀನುಗಾರಿಕೆ ಸಹಾಯಕ ನಿರ್ದೇಶಕರು ಕೊಪ್ಪಳ: -7349711866, ಗಂಗಾವತಿ-&9632338221, ಕುಷ್ಟಗಿ&9632338221 ಸಂಪರ್ಕಿಸುವಂತೆ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.