ಜಿಲ್ಲೆ

ಹುತಾತ್ಮರಾದವರ ಸ್ಮರಣಾರ್ಥ ಮೌನಾಚರಣೆ

Kopala - Raveendra V K

ಕೊಪ್ಪಳ: ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹುತಾತ್ಮರಾದವರ ಸ್ಮರಣಾರ್ಥ ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮೌನಾಚರಣೆ ಮೂಲಕ ಹುತಾತ್ಮರಾದವರಿಗೆ ಗೌರವ ಸಲ್ಲಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ನಲಿನ್​ ಅತುಲ್​, ಜಿಲ್ಲಾ ಪಂಚಾಯತ್​ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್​ ರತ್ನಂ ಪಾಂಡೆಯ, ಜಿಲ್ಲಾ ತರಬೇತಿ ಕೇಂದ್ರದ ಪ್ರಾಚಾರ್ಯರಾದ ಕೃಷ್ಣ ಮೂರ್ತಿ ದೇಸಾಯಿ, ಪಶು ಇಲಾಖೆ ಉಪನಿರ್ದೇಶಕ ಡಾ ಪಿ.ಎಂ.ಮಲ್ಲಯ್ಯ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ ನಂದಕುಮಾರ ಸೇರಿದಂತೆ ಜಿಲ್ಲಾಧಿಕಾರಿ ಕಛೇರಿ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.