ಕೊಪ್ಪಳ: ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬ ಆಚರಣೆ ವೇಳೆ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಡಿಸಿ ಡಾ.ಸುರೇಶ ಬಿ.ಇಟ್ನಾಳ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.
ಎಲ್ಲ ರಸ್ತೆಗಳಲ್ಲಿ ಬೀದಿ ದೀಪ ಅಳವಡಿಸಿ. ಅಗತ್ಯ ಇರುವೆಡೆ ಸಿಸಿಟಿವಿ ಕ್ಯಾಮರಾ ಹಾಕಿ. ಜೆಸ್ಕಾಂ ಅಧಿಕಾರಿಗಳು ಲೋ ಲೈನ್ ಹ್ಯಾಂಗಿಂಗ್ ತಂತಿಗಳನ್ನು ಸರಿಪಡಿಸಿ. ಗಣಪತಿ ಮೂರ್ತಿ ಪ್ರತಿಷ್ಠಾಪನೆ ಪ್ರದೇಶದಲ್ಲಿ ಅಗ್ನಿ ಅವಡಗಳ ಬಗ್ಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ತಿಳಿಸಿ. ತಹಸೀಲ್ದಾರ್ಗಳು, ಪೊಲೀಸ್ ಅಧಿಕಾರಿಗಳು ನಿಮ್ಮ ವ್ಯಾಪ್ತಿಯಲ್ಲಿ ಶಾಂತಿ ಸಭೆ ನಡೆಸಿ. ಸಮಸ್ಯೆಗಳಾದಲ್ಲಿ ತಕ್ಷಣ ಮೇಲಧಿಕಾರಿಗಳ ಗಮನಕ್ಕೆ ತನ್ನಿ. ಎಲ್ಲ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ ಎಂದು ತಾಕೀತು ಮಾಡಿದರು.
ಎಸ್ಪಿ ಡಾ.ರಾಮ್ ಎಲ್. ಅರಸಿದ್ದಿ ಮಾತನಾಡಿ, ಗಣೇಶ ಮೂರ್ತಿ ವಿಸರ್ಜನಾ ಸ್ಥಳಗಳಾದ ದಾಸನಾಳ ಬ್ರಿಡ್ಜ್, ಕೊಪ್ಪಳದ ಹುಲಿಕೆರೆ ಸೇರಿ ಇತರೆಡೆ ಬ್ಯಾರಿಕೇಡ್, ಲೈಟಿಂಗ್ ಅಳವಡಿಸಿ. ಕಾನೂನು ಸುವ್ಯವಸ್ಥೆ ಸಮಸ್ಯೆ ಇದ್ದಲ್ಲಿ ಅಧಿಕಾರಿಗಳು ನಮ್ಮ ಗಮನಕ್ಕೆ ತನ್ನಿ ಎಂದು ತಿಳಿಸಿದರು.
ಎಲ್ಲ ತಹಸೀಲ್ದಾರ್ಗಳು, ತಾಪಂ ಇಒಗಳು, ನಗರ&ಸ್ಥಳಿಯ ಸಂಸ್ಥೆ, ಅರಣ್ಯ, ಪೊಲೀಸ್, ಪರಿಸರ ಅಧಿಕಾರಿಗಳಿದ್ದರು.