ಜಿಲ್ಲೆ

ಕೊಲೆ ಅಪರಾಧಿಗೆ 9 ವರ್ಷ ಜೈಲು ಶಿಕ್ಷೆ

ಕೊಪ್ಪಳ: ವ್ಯಕ್ತಿಯೊಬ್ಬನ ಕೊಲೆಗೆ ಯತ್ನಿಸಿದವನ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 9 ವರ್ಷ ಜೈಲು ಶಿಕ್ಷೆ ಹಾಗೂ 7 ಸಾವಿರ ರೂ. ದಂಡ ವಿಧಿಸಿ ಗಂಗಾವತಿ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ಓಂಪ್ರಕಾಶ ಶಿೆಗೆ ಗುರಿಯಾದಾತ. 2022ರ ಅಕ್ಟೋಬರ್​ 27ರಂದು ಗಂಗಾವತಿ ತಾಲೂಕಿನ ಚಿಕ್ಕ ಜಂತಕಲ್​ನಲ್ಲಿ ತನ್ನ ಸ್ನೇಹಿತನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದ. ಕುತ್ತಿಗೆಗೆ ಚಾಕುವಿನಿಂದ ಇರಿದು ಕೊಲೆ ಮಾಡಲು ಪ್ರಯತ್ನಿಸಿದ್ದ. ಈ ಸಂಬಂಧ ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖಾಧಿಕಾರಿ ಮಂಜುನಾಥ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯಕ ಅವರು, ಆರೋಪಿ ತಪ್ಪಿತಸ್ಥನೆಂದು ತೀರ್ಮಾನಿಸಿದ್ದಾರೆ. ಭಾರತೀಯ ದಂಡ ಸಂಹಿತೆ ಕಲಂ 307 ಅಪರಾಧಕ್ಕೆ 7 ವರ್ಷ ಸೆರೆವಾಸ, 5000 ರೂ. ದಂಡ ವಿಧಿಸಿದ್ದಾರೆ. 3 ತಿಂಗಳೊಳಗೆ ದಂಡ ಪಾವತಿಸದಿದ್ದಲ್ಲಿ 3 ತಿಂಗಳು ಸಾದಾ ಜೈಲು ಶಿಕ್ಷೆ ಅನುಭವಿಸುವಂತೆ ತಿಳಿಸಿದ್ದಾರೆ. ಐಪಿಸಿ 506 ಅಪರಾಧಕ್ಕೆ 2 ವರ್ಷ ಜೈಲು ಶಿಕ್ಷೆ ಮತ್ತು 2 ಸಾವಿರ ರೂ. ದಂಡ ಹಾಕಿದ್ದು, ದಂಡ ಪಾವತಿಸದಿದ್ದಲ್ಲಿ 2 ತಿಂಗಳು ಸಾದಾ ಶಿಕ್ಷೆ ಅನುಭವಿಸುವಂತೆ ಜೂ.9ರಂದು ತೀರ್ಪು ನೀಡಿದ್ದಾರೆ.

ಅಭಿಯೋಜನೆ ಪರವಾಗಿ ಸರ್ಕಾರಿ ಅಭಿಯೋಜಕಿ ನಾಗಲಕ್ಷಿ$್ಮ ಎಸ್​. ವಾದ ಮಂಡಿಸಿದ್ದಾರೆ. ಗಂಗಾವತಿ ಗ್ರಾಮೀಣಠಾಣೆ ಸಿಬ್ಬಂದಿ ವೆಂಕಟೇಶ, ಮಂಜುನಾಥ ನ್ಯಾಯಾಲಯಕ್ಕೆ ಸಾಗಳನ್ನು ಹಾಜರುಪಡಿಸಿ ಸಹಕರಿಸಿದ್ದಾಗಿ ಗಂಗಾವತಿ ಸರ್ಕಾರಿ ಅಭಿಯೋಜಕರ ಕಚೇರಿ ತಿಳಿಸಿದೆ.