ಜಿಲ್ಲೆ

ಜಾತ್ರೆ ವ್ಯವಸ್ಥೆ ಅಚ್ಚುಕಟ್ಟಾಗಿರಲಿ

ಕೊಪ್ಪಳ: ಬರುವ ಜನೆವರಿ 15ರಿಂದ ಗವಿಸಿದ್ದೇಶ್ವರ ಜಾತ್ರೋತ್ಸವ ಇರಲಿದೆ. ಟ್ರಾಫಿಕ್​ ಸಮಸ್ಯೆಗಳಾಗದಂತೆ ಅಚ್ಚುಕಟ್ಟಾದ ವ್ಯವಸ್ಥೆ ಮಾಡಿ ಎಂದು ಜಿಲ್ಲಾಧಿಕಾರಿ ನಲಿನ್​ ಅತುಲ್​ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಜಾತ್ರೆ ಅಂಗವಾಗಿ ಸೋಮವಾರ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.

ಜಾತ್ರೆಗೆ ಬರುವ ಭಕ್ತರಿಗೆ ತೊಂದರೆ ಆಗದಂತೆ ನೋಡಿಕೊಳ್ಳಿ. ತುರ್ತು ಸೇವೆ ಒದಗಿಸಲು ಸಜ್ಜಾಗಿರಿ. ಸ್ವಚ್ಛತೆಗೆ ಪೌರ ಕಾರ್ಮಿಕರನ್ನು ನಿಯೋಹಿಸಿ. ಕುಡಿವ ನೀರು ಸೇರಿ ಅಗತ್ಯ ಸೌಲಭ್ಯ ಕಲ್ಪಿಸಿ ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಜಿಪಂ ಸಿಇಒ ರಾಹುಲ್​ ರತ್ನಂ ಪಾಂಡೆಯ ಮಾತನಾಡಿ, ಕುಡಿವ ನೀರಿನ ಟ್ಯಾಂಕರ್​ಗಳನ್ನು ಹೆಚ್ಚುವರಿಯಾಗಿ ಇಟ್ಟುಕೊಳ್ಳಿ. ವಿದ್ಯುತ್​ ಸುರಕ್ಷತೆ ಬಗ್ಗೆ ಎಚ್ಚರವಹಿಸಿ. ಎಲ್ಲೆಂದರಲ್ಲಿ ತಂತಿ ಹಾಕಬೇಡಿ. ಅಗ್ನಿಶಾಮಕ ವಾಹನ, ಸಿಬ್ಬಂದಿ ನಿಯೋಜಿಸುವಂತೆ ತಿಳಿಸಿದರು.

ಎಸ್ಪಿ ಡಾ.ರಾಮ್​ ಎಲ್​.ಅರಸಿದ್ದಿ ಮಾತನಾಡಿ, ಟ್ರಾಫಿಕ್​ ಸಮಸ್ಯೆಗಳಾಗದಂತೆ ಪಾರ್ಕಿಂಗ್​ ವ್ಯವಸ್ಥೆ ಮಾಡಲಾಗುವುದು. ಈ ಬಗ್ಗೆ ಮಾಹಿತಿ ನೀಡುತ್ತೇವೆ. ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಲಾಗುವುದು. ಲಾಂತರ ಜನ ಸೇರುವುದರಿಂದ ಲೈಟಿಂಗ್​, ಸೂಕ್ತ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು ಎಂದರು.

ಎಡಿಸಿ ಸಿದ್ರಾಮೇಶ್ವರ, ಎಸಿ ಕ್ಯಾ.ಮಹೇಶ್​ ಮಾಲಗಿತ್ತಿ, ಡಿಯುಡಿಸಿ ಪಿಡಿ ರೇಷ್ಮಾ ಹಾನಗಲ್​, ತಹಸೀಲ್ದಾರ್​ ವಿಠ್ಠಲ್​ ಚೌಗಲಾ, ಮಠದ ಪ್ರತಿನಿಧಿಗಳಾದ ಬಸವರಾಜ ಬಳ್ಳೊಳ್ಳಿ, ಶರಣು ಶೆಟ್ಟರ್​ ಇತರರಿದ್ದರು.

ಸೇತುವೆ ವೀಸಿದ ಸಂಸದ

ಸಂಸದ ರಾಜಶೇಖರ ಹಿಟ್ನಾಳ ಸೋಮವಾರ ನಗರದ ಕುಷ್ಟಗಿ ರಸ್ತೆ ರೈಲ್ವೆ ಮೇಲ್ಸೇತುವೆ ಕಾಮಗಾರಿ ವೀಸಿದರು. ಜನೆವರಿ ಮೊದಲ ವಾರದಲ್ಲಿ ಉದ್ಘಾಟನೆಗೆ ಕ್ರಮವಹಿಸುವುದಾಗಿ ತಿಳಿಸಿದರು. ಇನ್ನು ಸಣ್ಣಪುಟ್ಟ ಕಾಮಗಾರಿ ಇದೆ. ಗವಿಸಿದ್ದೇಶ್ವರ ಜಾತ್ರೆ ವೇಳೆಗೆ ಸಿದ್ಧಪಡಿಸಿ. ಇದರಿಂದ ಜನರಿಗೆ ಅನುಕೂಲವಾಗಲಿದೆ. ಬೇಗ ಪೂರ್ಣಗೊಳಿಸಿದರೆ, ಜ.7ರಂದು ಉದ್ಘಾಟನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ರೈಲ್ವೆ ಅಧಿಕಾರಿಗಳಿಗೆ ಸೂಚಿಸಿದರು. ಮಾಜಿ ಸಂಸದ ಸಂಗಣ್ಣ ಕರಡಿ ಇತರರಿದ್ದರು.