ಕೊಪ್ಪಳ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ದ್ವೀತಿಯ ಪಿ.ಯು.ಸಿ.ಯಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕ ಪಡೆದ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂದ ಜಿಲ್ಲಾಧ್ಯಕ್ಷ ನಾಗರಾಜ ಜುಮ್ಮನ್ನವರ ತಿಳಿಸಿದ್ದಾರೆ.
ವಿದ್ಯಾರ್ಥಿಗಳು 2025ರ ಎಸ್.ಎಸ್.ಎಲ್.ಸಿ, ಪಿ.ಯು.ಸಿ. ದೃಢೀಕೃತ ಅಂಕಪಟ್ಟಿ, ಭಾವಚಿತ್ರ, ವಿದ್ಯಾರ್ಥಿಯ ತಂದೆ ಅಥವಾ ತಾಯಿ ಸರ್ಕಾರಿ ಸೇವಾ ದೃಢೀಕರಣ ಪತ್ರ, ಸಂಘದಿಂದ ಪಡೆದ ದೃಢೀಕರಣ ಪತ್ರ ಪ್ರತಿ ಲಗತ್ತಿಸಿರಬೇಕು. ಮೇ 31ರೊಳಗೆ ಅರ್ಜಿ ಸಲ್ಲಿಸಲು ಮಾಹಿತಿ ನೀಡಿದ್ದಾರೆ.