ಜಿಲ್ಲೆ

ಪರಿಸರ ಸ್ನೇಹಿ ಗೌರಿಗಣೇಶ ಹಬ್ಬ ಆಚರಿಸಲು ಮನವಿ

district koppal gowri ganesh festival ecofree

ಕೊಪ್ಪಳ: ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಿಸುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕೊಪ್ಪಳ ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿಗಳು ಜಿಲ್ಲೆಯ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಪ್ರತಿ ವರ್ಷದಂತೆ ಈ ಬಾರಿಯೂ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕಚತುರ್ಥಿ ಹಬ್ಬವು ಸಮೀಪಿಸುತ್ತಿದೆ. ಈ ಸಂದರ್ಭದಲ್ಲಿ ಸಾರ್ವಜನಿಕರು ಪ್ಲಾಸ್ಟರ್​ ಆಫ್​ ಪ್ಯಾರಿಸ್​(ಪಿ.ಒ.ಪಿ) ಮತ್ತು ಬಣ್ಣದ ವಿಗ್ರಹಗಳನ್ನು ಸ್ಥಾಪಿಸಿ ಪೂಜಿಸಿದ ನಂತರ ಕೆರೆ, ಬಾವಿ ಹಾಗೂ ಇನ್ನಿತರೆ ನೈಸರ್ಗಿಕ ಜಲಮೂಲಗಳಲ್ಲಿ ವಿಸರ್ಜಿಸುವುದು ಸಂಪ್ರದಾಯವಾಗಿದ್ದು, ಇದರಿಂದಾಗಿ ನೈಸರ್ಗಿಕ ಜಲಮೂಲಗಳು ಕಲುಷಿತಗೊಳ್ಳಲಿವೆ. ಭೌತಿಕ ಹಾಗೂ ರಾಸಾಯನಿಕ ಗುಣಗಳು ಮಾರ್ಪಟ್ಟು ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುವುದಲ್ಲದೇ ಪ್ರಾಣಿ, ಪಕ್ಷಿ ಹಾಗೂ ಜಲಚರಗಳ ಜೀವಕ್ಕೆ ಅಪಾಯವಾಗುತ್ತದೆ. ಇದಲ್ಲದೇ ಸಾರ್ವಜನಿಕ ಆರೋಗ್ಯಕ್ಕೂ ದಕ್ಕೆ ಉಂಟಾಗುತ್ತದೆ.

ಪ್ಲಾಸ್ಟರ್​ ಆಫ್​ ಪ್ಯಾರಿಸ್​ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ಇನ್ಮುಂದೆ ರಾಜ್ಯದ ಯಾವುದೇ ಕೆರೆ ಮತ್ತು ಇತರೇ ಜಲ ಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ಪರಿಸರ ಸ್ನೇಹಿ ಗೌರಿಗಣೇಶ ಹಬ್ಬ ಆಚರಿಸಿ ನೈಸರ್ಗಿಕ ಜಲ ಸಂಪನ್ಮೂಲಗಳನ್ನು ಸಂರಕ್ಷಿಸಲು ಸಹಕರಿಸಬೇಕು.

ಪ್ಲಾಸ್ಟರ್​ ಆಫ್​ ಪ್ಯಾರಿಸ್​ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ತಯಾರಿಸಬಾರದೆಂದು ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು (ನಿವಾರಣೆ ಮತ್ತು ನಿಯಂತ್ರಣ) ಕಾಯ್ದೆ 1974ರ ಪ್ರಕಾರ ಕಲಂ 33 (ಎ) ಅನ್ವಯ ರಾಜ್ಯದ ಯಾವುದೇ ಜಲ ಮೂಲಗಳಲ್ಲಿ ಪ್ಲಾಸ್ಟರ್​ ಆಫ್​ ಪ್ಯಾರಿಸ್​ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ವಿಸರ್ಜಿಸುವುದನ್ನು ನಿಫಿೇಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು.