ಜಿಲ್ಲೆ

ಮಕ್ಕಳನ್ನು ನಿತ್ಯ ಶಾಲೆಗೆ ಕಳುಹಿಸಿ

ಕೊಪ್ಪಳ: ಮಕ್ಕಳನ್ನು ನಿತ್ಯ ಶಾಲೆಗೆ ಕಳುಹಿಸಬೇಕು. ಎಸ್ಸೆಸ್ಸೆಲ್ಸಿಯು ವಿದ್ಯಾರ್ಥಿಗಳ ಜೀವನದಲ್ಲಿ ಪ್ರಮುಖ ಘಟ್ಟವಾಗಿದ್ದು, ಪ್ರತಿಯೊಬ್ಬರು ಶ್ರಮವಹಿಸಬೇಕಾದ ಅಗತ್ಯವಿದೆ ಎಂದು ಎಸ್ಡಿಎಂಸಿ ಅಧ್ಯಕ್ಷ ಯಮನೂರಪ್ಪ ಚಿಕ್ಕಣ್ಣನವರು ಹೇಳಿದರು.

ಸಮೀಪದ ಹಟ್ಟಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಆಯೋಜಿಸಿದ್ದ ಪಾಲಕರ ಸಭೆಯನ್ನು ಉದ್ದೇಶಿಸಿ ಗುರುವಾರ ಮಾತನಾಡಿದರು.

ಗ್ರಾಮೀಣ ಪ್ರದೇಶದ ಅನೇಕ ವಿದ್ಯಾರ್ಥಿಗಳು ಪ್ರತಿಭಾವಂತರಿದ್ದು, ಅವರಿಗೆ ಪ್ರೋತ್ಸಾಹ ಅಗತ್ಯವಿದೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಶಿಕ್ಷಕರು ನೀಡಬೇಕು ಎಂದರು.

ಶಿಕ್ಷಕಿ ಶುಭ ಮಂಗಳ ಮಾತನಾಡಿ, ಪಾಲಕರು ಹಾಗೂ ಶಿಕ್ಷಕರು ಶ್ರಮವಹಿಸಿದಾಗ ಮಾತ್ರ ಎಸ್ಸೆಸ್ಸೆಲ್ಸಿ ಮಕ್ಕಳ ಫಲಿತಾಂಶವನ್ನು ಉತ್ತಮ ಪಡಿಸಲು ಸಾಧ್ಯವಾಗುತ್ತದೆ. ಬೆಳಗಿನ ಸಮಯದಲ್ಲಿ ಮಕ್ಕಳಿಗೆ ವಿಶೇಫಿ ತರಗತಿಯನ್ನು ತೆಗೆದುಕೊಳ್ಳಲಾಗುತ್ತಿದೆ ಹಾಗಾಗಿ ಪ್ರತಿಯೊಬ್ಬ ಪಾಲಕರು ಆ ತರಗತಿಗೆ ತಮ್ಮ ಮಕ್ಕಳನ್ನು ಕಳುಹಿಸಬೇಕು. ಸಾಯಂಕಾಲ ಗುಂಪು ಅಧ್ಯಯನ ಇರುತ್ತದೆ ಕಡ್ಡಾಯವಾಗಿ ಮಕ್ಕಳ ಹಾಜರಿರಬೇಕು. ಮಕ್ಕಳನ್ನು ಪ್ರತಿದಿನ ಶಾಲೆಗೆ ಕಳುಹಿಸಲು ಮೂಲಕ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದರು.

ಪಾಲಕರ ಪ್ರತಿನಿಧಿ ಗವಿಸಿದ್ದಪ್ಪ ತಳಕಲ್​, ಕೆಎಚ್​ ಪಿಟಿಯ ಸಮುದಾಯ ಸಂಘಟಕಿ ಜುನಾಬಿ ವಡ್ಡಟ್ಟಿ, ಶಿಕ್ಷಕರಾದ ರವಿಕುಮಾರ ಬಂಡಿ, ಹಂಪಮ್ಮ ಪೂಜಾರ, ಗೌತಮಿ, ಕಾಶಿನಾಥ್​ ಹಿರೇಮಠ ಹಾಗೂ ಇತರರು ಇದ್ದರು.