ಜಿಲ್ಲೆ

ಹುಲಿಗೆಮ್ಮನ ದರ್ಶನ ಪಡೆದ ಸಚಿವ ರಾಮಲಿಂಗಾರೆಡ್ಡಿ, ಶಾಸಕ ಜನಾರ್ದನ ರೆಡ್ಡಿ

ಕೊಪ್ಪಳ: ತಾಲೂಕಿನ ಶಕ್ತಿ ದೇವತೆ ಹುಲಗಿಯ ಹುಲಿಗೆಮ್ಮ ದೇವಿ ಸನ್ನಿಧಾನಕ್ಕೆ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಮಂಗಳವಾರ ಭೇಟಿ ನೀಡಿ ದರ್ಶನ ಪಡೆದರು.

ಡಿ. 23 ಮತ್ತು 24 ರಂದು ಅಂಜನಾದ್ರಿಯಲ್ಲಿ ಹನುಮ ಮಾಲೆ ವಿಸರ್ಜನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಹಲವು ಸಭೆಗಳಾಗಿವೆ. ಪೂರ್ವ ಸಿದ್ಧತೆ ಭರದಿಂದ ಸಾಗಿದೆ.

ಈ ಹಿನ್ನೆಲೆಯಲ್ಲಿ ಮಂಗಳವಾರ ಸಚಿವ ರಾಮಲಿಂಗಾರೆಡ್ಡಿ ಭೇಟಿ ನೀಡಿದ್ದು ಸಭೆ ನಡೆಸಲಿದ್ದಾರೆ. ಮೊದಲು ಹುಲಿಗೆಮ್ಮ ದೇವಿ ದರ್ಶನ ಪಡೆದು ಬಳಿಕ ದೇವಾಲಯ ಅಭಿವೃದ್ಧಿ ಸಂಬಂಧ ಸಭೆ ನಡೆಸಿದರು.

ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಸಾಥ್ ನೀಡಿದ್ದು, ಸಚಿವರೊಂದಿಗೆ ದೇವಿ ದರ್ಶನ ಪಡೆದರು. ಬಳಿಕ ಸಭೆಯಲ್ಲಿ ಭಾಗಿಯಾದರು.

ಮಾಜಿ ಶಾಸಕ ಬಸವರಾಜ ಹಿಟ್ನಾಳ್, ಎಡಿಸಿ ಸಾವಿತ್ರಿ ಕಡಿ, ತಹಸೀಲ್ದಾರ್ ವಿಠ್ಠಲ ಚೌಗಲಾ, ತಾಪಂ ಇಒ ದುಂಡಪ್ಪ ತುರಾದಿ, ದೇವಸ್ಥಾನ ಇಒ‌ ಅರವಿಂದ ಸುತಗೊಂಡಿ ಇತರರಿದ್ದರು.