ಕೊಪ್ಪಳದಲ್ಲಿ ಸೋಮವಾರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ.ಮೋಹನ್​ ರಾಜ್​ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಭಾಗಿಯಾಗಿದ್ದ ಅಧಿಕಾರಿಗಳು. 
ಜಿಲ್ಲೆ

ಸಮನ್ವಯತೆಯಿಂದ ಕೆಲಸ ಮಾಡಿ, ಉಸ್ತುವಾರಿ ಕಾರ್ಯದರ್ಶಿ ಕೆ.ಪಿ.ಮೋಹನ್​ ರಾಜ್​ ಸೂಚನೆ

ಕೊಪ್ಪಳ: ಎಲ್ಲ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ.ಮೋಹನ್​ ರಾಜ್​ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಪಂ ಜೆ.ಎಚ್​.ಪಟೇಲ್​ ಸಭಾಂಗಣದಲ್ಲಿ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸೋಮವಾರ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾತನಾಡಿದರು.

ತ್ವರಿತವಾಗಿ ಅಭಿವೃದ್ಧಿ ಕಾರ್ಯ ಮುಗಿಸಲು ವಿವಿಧ ಇಲಾಖೆಗಳನ್ನು ಒಳಗೊಂಡ ಉಪ ಸಮಿತಿ ರಚಿಸಲಾಗಿದೆ. ಎಲ್ಲ ಸಮಿತಿಗಳು ಪ್ರತಿ ತಿಂಗಳು ನಿಮ್ಮ ಹಂತದಲ್ಲಿ ಪ್ರಗತಿ ಪರಿಶೀಲನೆ ನಡೆಸಬೇಕು. ಇಲಾಖೆಗಳಿಂದ ಸಾರ್ವಜನಿಕರಿಗೆ ನೀಡುವ ಸೇವೆಗಳು, ಯೋಜನೆ ಮತ್ತು ಇತರ ಕಾರ್ಯಕ್ರಮಗಳು ಸಮರ್ಪಕವಾಗಿ ಅನುಷ್ಠಾನ ಆಗುವಂತೆ ನೋಡಿಕೊಳ್ಳಿ. ಮಳೆ ಆರಂಭವಾಗಿದ್ದು, ಕುಡಿವ ನೀರಿನ ಮೂಲಗಳಿಗೆ ಕಲುಷಿತ ನೀರು ಸೇರದಂತೆ ನೋಡಿಕೊಳ್ಳಿ. ದುರಸ್ಥಿಗಳಿದ್ದಲ್ಲಿ ತ್ವರಿತವಾಗಿ ಮುಗಿಸಿ. ಜಾಕ್ವೆಲ್​ ಸೇರಿ ಇತರೆಡೆ ಸಂಬಂಧಿಸಿದ ಅಧಿಕಾರಿಗಳು ಖುದ್ದು ಭೇಟಿ ನೀಡಿ ಪರಿಶೀಲಿಸಿ. ನೀರು ಪೂರೈಕೆಗೂ ಮುನ್ನ ಕಡ್ಡಾಯವಾಗಿ ಪರೀೆ ನಡೆಸಿ. ಕುಡಿಯಲು ಯೋಗ್ಯವಿಲ್ಲದ ನೀರು ಪುರೈಸಬೇಡಿ ಎಂದು ತಾಕೀತು ಮಾಡಿದರು.

ಜಿಪಂ ಸಿಇಒ ರಾಹುಲ್​ ರತ್ನಂ ಪಾಂಡೆಯ ಮಾತನಾಡಿ, ಕೆರೆ, ಕೊಳವೆ ಬಾವಿ ಒಳಗೊಂಡು ಜಿಲ್ಲೆಯಲ್ಲಿ 3 ಸಾವಿರ ಕುಡಿವ ನೀರು ಮೂಲಗಳಿವೆ. ಪ್ರತಿ ತಿಂಗಳು ಕಡ್ಡಾಯವಾಗಿ 1 ಸಾವಿರ ಮೂಲಗಳ ಪರೀೆ ನಡೆಸುತ್ತಿದ್ದೇವೆ. ಕುಡಿಯಲು ಯೋಗ್ಯವಿಲ್ಲದ ನೀರಿನ ಮೂಲ ಬಂದ್​ ಮಾಡಲಾಗುತ್ತಿದೆ ಎಂದು ವರದಿ ಒಪ್ಪಿಸಿದರು.

ಕೃಷಿ ಜಂಟಿ ನಿರ್ದೇಶಕ ರುದ್ರೇಶಪ್ಪ ಮಾತನಾಡಿ, ಜಿಲ್ಲೆಯಲ್ಲಿ ಜನೆವರಿ 1ರಿಂದ ಜೂ.24ವರೆಗೆ 147 ಮಿ.ಮೀ.ವಾಡಿಕೆ ಮಳೆ ಪೈಕಿ 236 ಮಿ.ಮೀ. ಆಗಿದೆ. ಶೇ.60ರಷ್ಟು ಹೆಚ್ಚುವರಿ ಮಳೆ ಆಗಿದೆ. 3.08 ಲಕ್ಷ ಹೆಕ್ಟೇರ್​ ಕೃಷಿ ಭೂಮಿ ಪೈಕಿ ಈವರೆಗೆ 1.58 ಹೆಕ್ಟೇರ್​ ಬಿತ್ತನೆಯಾಗಿದೆ. ಬಿತ್ತನೆ ಬೀಜ, ರಸಗೊಬ್ಬರ ಕೊರತೆ ಇಲ್ಲ ಎಂದರು.

ಪಶುಪಾಲನಾ ಇಲಾಖೆ ಡಿಡಿ ಡಾ.ಪಿ.ಎಂ.ಮಲ್ಲಯ್ಯ ಮಾತನಾಡಿ, ಜಿಲ್ಲೆಯಲ್ಲಿ 12 ಲಕ್ಷ ಜಾನುವಾರುಗಳಿದ್ದು, 6.25 ಲಕ್ಷ ಕುರಿ, 1.72 ಲಕ್ಷ ಮೇಕೆ, 2.31 ಲಕ್ಷ ದನ, ಕರುಗಳು ಹಾಗೂ 60 ಸಾವಿರ ಎಮ್ಮೆಗಳಿವೆ. ಕುರಿ, ಮೇಕೆಗಳಿಗೆ ಇಟಿ ಲಸಿಕೆ ವಿತರಿಸಲಾಗಿದೆ. ಜಾನುವಾರುಗಳಿಗೆ ಅಗತ್ಯ ಲಸಿಕೆ, ಔಷಧಿಗಳನ್ನು ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ರೈತರ ಬೇಡಿಕೆಗೆ ತಕ್ಕಂತೆ ಬಿತ್ತನೆ ಬೀಜ, ರಸಗೊಬ್ಬರ ಪೂರೈಸಿ. ಜಾನುವಾರುಗಳಿಗೆ ಲಸಿಕೆ ಹಾಕಿಸುವಂತೆ ಉಸ್ತುವಾರಿ ಕಾರ್ಯದರ್ಶಿ ಸೂಚಿಸಿದರು. ಕಳೆದ ವರ್ಷ ಎಸ್ಸೆಸ್ಸೆಲ್ಸಿ ಲಿತಾಂಶ ಶೇ.64ರಷ್ಟು ಬಂದಿದೆ. ಗಣನೀಯವಾಗಿ ಕುಸಿತ ಕಂಡಿದ್ದು, ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು. ನಾಲ್ಕು ವರ್ಷಗಳ ಸಾಧನೆ ವಿವರದೊಂದಿಗೆ ಸೂಕ್ತ ವರದಿ ಸಲ್ಲಿಸುವಂತೆ ಸೂಚಿಸಿದರು.

ಜಿಪಂ ಮುಖ್ಯ ಯೋಜನಾಧಿಕಾರಿ ಡಿ.ಮಂಜುನಾಥ, ಡಿಯುಡಿಸಿ ಪಿಡಿ ಕಾವ್ಯಾರಾಣಿ, ಡಿಎಚ್​ಒ ಡಾ.ಟಿ.ಲಿಂಗರಾಜು, ಕಿಮ್ಸ್​ ನಿರ್ದೇಶಕ ಡಾ.ವಿಜಯನಾಥ ಇಟಗಿ, ಡಿಡಿಪಿಐ ಶ್ರೀಶೈಲ ಬಿರಾದಾರ ಇತರರಿದ್ದರು.