ಕೊಪ್ಪಳ: ಮಹಿಳೆಯರಿಗೆ ಉದ್ಯೋಗಕ್ಕಾಗಿ ನೇರ ಸಂದರ್ಶನ ಆಗಸ್ಟ್ 13ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1.30ರ ವರೆಗೆ ಕೊಪ್ಪಳದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಆಯೋಜಿಸಲಾಗಿದೆ.
ಪ್ರತಿಷ್ಠಿತ ಖಾಸಗಿ ಕಂಪನಿಯು ಭಾಗವಹಿಸಲಿದ್ದು ನೇರ ಸಂದರ್ಶನದ ಮೂಲಕ ಮಹಿಳೆಯರನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಎಸ್.ಎಸ್.ಎಲ್.ಸಿ, ಪಿಯುಸಿ, ಡಿಪ್ಲೋಮಾ, ಮತ್ತು ಪದವಿಧರ ಮಹಿಳಾ ಅಭ್ಯರ್ಥಿಗಳಿಗೆ ನೇರ ಸಂದರ್ಶನ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ ಉಚಿತ ಪ್ರವೇಶವಿರುತ್ತದೆ.
ಹೆಚ್ಚಿನ ಮಾಹಿತಿಗಾಗಿಜಿಲ್ಲಾಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಅಥವಾ ದೂ.ಸಂ: 08539-220859, ಮೊಸಂ: 6361143422 ಹಾಗೂ 8431525339 ಮೂಲಕ ಸಂಪರ್ಕಿಸುವಂತೆ ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.