ಕೊಪ್ಪಳ: ಜಿಲ್ಲೆಯ ಐತಿಹಾಸಿಕ ಪುಣ್ಯಕ್ಷೇತ್ರ ಕನಕಗಿರಿ ಉತ್ಸವ ಮಾ.20 ಮತ್ತು 21ರಂದು ನಡೆಯಲಿದ್ದು, ಉತ್ಸವದ ಸಾಂಸತಿಕ ಕಾರ್ಯಕ್ರಮಕ್ಕಾಗಿ ಕಲಾವಿದರು ಮತ್ತು ಕಲಾತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಸೂಚಿಸಿದದಂತೆ ಸಾಂಸತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಲಾವಿದರು ಮತ್ತು ಕಲಾತಂಡಗಳಿಗೆ ಅವಕಾಶ ಕಲ್ಪಿಸಲಾಗಿದೆ. ಕೊಪ್ಪಳ ಜಿಲ್ಲಾ ವ್ಯಾಪ್ತಿಯ ಆಸಕ್ತ ಕಲಾವಿದರು ಮತ್ತು ಕಲಾತಂಡಗಳು ತಮ್ಮ ಸ್ವ-ವಿವರಗನ್ನು ಹಾಗೂ ಕಲಾಪ್ರದರ್ಶನದ ವಿವರಗಳನ್ನೊಳಗೊಂಡ ದಾಖಲೆಗಳು ಮತ್ತು ಆಧಾರ ಕಾರ್ಡ್, ಬ್ಯಾಂಕ್ ಪಾಸ್ ಬುಕ್ನೊಂದಿಗೆ ಮಾ.10ರ ಸಂಜೆ 6 ಗಂಟೆಯೊಳಗೆ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸತಿ ಇಲಾಖೆ ಜಿಲ್ಲಾಡಳಿತ ಭವನ ಕೊಪ್ಪಳ ಇಲ್ಲಿಗೆ ಸಲ್ಲಿಸುವಂತೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.