ಜಿಲ್ಲೆ

ಸಹಾಯಧನಕ್ಕೆ ಅರ್ಜಿ ಆಹ್ವಾನ

Kopala - Raveendra V K

ಕೊಪ್ಪಳ: ಕುಷ್ಟಗಿ ಪುರಸಭೆ ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ 2025-26ನೇ ಸಾಲಿನ ವಿವಿಧ ಯೋಜನೆಗಳಡಿ ಸಹಾಯಧನ ನೀಡಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಪುರಸಭೆಯ ಎಸ್​.ಎಫ್​.ಸಿ ಶೇ.7.25 ರ ಯೋಜನೆಯಡಿ ಹಿಂದುಳಿದ ವರ್ಗದವರಿಗೆ ಸ್ವಂತ ಉದ್ಯೋಗಕ್ಕಾಗಿ ಬ್ಯಾಂಕಿನಿಂದ ಸಾಲ ಪಡೆದವರಿಗೆ, ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದ ಕ್ರೀಡೆ, ಕಲೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಿದವರಿಗೆ, ಶೇ.5 ರ ಯೋಜನೆಯಡಿ ವಿಕಲಚೇತನ ವಿದ್ಯಾರ್ಥಿಗಳಿಗೆ ಹಾಗೂ ವಿಕಲಚೇತನರ ಶಸ್ತ್ರಚಿಕಿತ್ಸೆಗೆ ಸಹಾಯಧನ ನೀಡಲಾಗುತ್ತದೆ.

ಅರ್ಹ ಫಲಾನುಭವಿಗಳು ಜುಲೈ 17 ರೊಳಗೆ ಕಾರ್ಯಾಲಯಕ್ಕೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪುರಸಭೆ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.