ಕೊಪ್ಪಳ: ಕಾರ್ಮಿಕ ಅಧಿಕಾರಿಗಳು ನಗರದ ಆರ್ಟಿಒ ಕಚೇರಿ ಬಳಿ ಕೆಲಸದಲ್ಲಿ ತೊಡಗಿದ್ದ ಇಬ್ಬರು ಕಿಶೋರ ಕಾರ್ಮಿಕರನ್ನು ಸೋಮವಾರ ರಸಿದ್ದು, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಲಾಗಿದೆ.
ಮಕ್ಕಳ ಸಹಾಯವಾಣಿಗೆ ಬಂದ ದೂರು ಆಧರಿಸಿ ದಾಳಿ ನಡೆಸಲಾಗಿದೆ. ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮಮದಾಪೂರ ಗ್ರಾಮದ ಜಡಿಯಪ್ಪ ಬೀರಪ್ಪ ಸುಣದಾಳ ಹಾಗೂ ಅಡಿವೆಪ್ಪ ನಿಂಗಪ್ಪ ಸಿಂದೊಳ್ಳಿ ಎಂಬುವರ ಕುರಿ ಹಿಂಡಿನಲ್ಲಿ ಇಬ್ಬರು ಕಿಶೋರ ಕಾರ್ಮಿಕರು ಪತ್ತೆಯಾಗಿದ್ದಾರೆ. ಅವರನ್ನು ಕೆಲಸದಿಂದ ಬಿಡುಗಡೆಗೊಳಿಸಿ 112 ಪೊಲೀಸ್ ಸಿಬ್ಬಂದಿ ಸಹಕಾರದಿಂದ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಲಾಗಿದೆ.
ಸಮಿತಿಯ ನಿರ್ದೇಶನ ಹಾಗೂ ದಾಖಲಾತಿಗಳ ಆಧಾರದ ಮೇಲೆ ಮುಂದಿನ ಕ್ರಮ ವಹಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಜಿಲ್ಲಾ ಬಾಲಕಾರ್ಮಿಕ ಯೋಜನೆ ನಿರ್ದೇಶಕ ಬಸವರಾಜ ಹಿರೇಗೌಡ್ರ, ಮಕ್ಕಳ ಸಹಾಯವಾಣಿ ಸಂಯೋಜಕ ಶರಣಪ್ಪ ಸಿಂಗನಾಳ, ವಿಷಯ ನಿರ್ವಾಹಕ ರಾಘವೇಂದ್ರರಾವ್ ಕುಲಕರ್ಣಿ, 112 ಸಹಾಯವಾಣಿಯ ಗವಿಸಿದ್ದಪ್ಪ ಕಾಳಿ ಇತರರಿದ್ದರು.