ಲೋಕಸಭೆ ಚುನಾವಣೆ ಮತ ಎಣಿಕೆ ಹಿನ್ನೆಲೆಯಲ್ಲಿ ಸೋಮವಾರ ಕೊಪ್ಪಳದ ಮತ ಎಣಿಕೆ ಕೇಂದ್ರಕ್ಕೆ ಸಾಮಾನ್ಯ ವೀಕ್ಷಕಿ ಹೇಮ ಪುಷ್ಪ ಶರ್ಮಾ ಭೇಟಿ ನೀಡಿ ಪರಿಶೀಲಿಸಿದರು. ಡಿಸಿ ನಲಿನ್​ ಅತುಲ್​, ಎಸ್ಪಿ ಯಶೋದಾ ವಂಟಗೋಡಿ, ಎಡಿಸಿ ಸಾವಿತ್ರಿ ಕಡಿ ಇದ್ದರು. 
ಜಿಲ್ಲೆ

ಮತ ಎಣಿಕಾ ಕೇಂದ್ರಕ್ಕೆ ವೀಕ್ಷಕರ ಭೇಟಿ

ಕೊಪ್ಪಳ: ಲೋಕಸಭೆ ಚುನಾವಣೆ ಮತ ಎಣಿಕೆ ಇಂದು ನಡೆಯಲಿದ್ದು, ಸೋಮವಾರ ಮತ ಎಣಿಕೆ ಕೇಂದ್ರಕ್ಕೆ ಚುನಾವಣಾ ಸಾಮಾನ್ಯ ವೀಕ್ಷಕಿ ಹೇಮ ಪುಷ್ಪಾ ಶರ್ಮಾ ಭೇಟಿ ನೀಡಿ ಪರಿಶೀಲಿಸಿದರು.

ಗವಿಸಿದ್ದೇಶ್ವರ ಪಿಯು ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದೆ. ಜಿಲ್ಲಾಡಳಿತ ಸಿದ್ಧತೆ ಕೈಗೊಂಡಿದೆ. ಕೇಂದ್ರದಲ್ಲಿ ಮೂಲ ಸೌಕರ್ಯ, ಮಾಧ್ಯಮ ಕೇಂದ್ರ, ಭದ್ರತಾ ಕೊಠಡಿ, ಸಿ.ಸಿ.ಟಿ.ವಿ, ಬ್ಯಾರಿಕೇಡಿಂಗ್​ ವ್ಯವಸ್ಥೆ, ಪೊಲೀಸ್​ ಅಧಿಕಾರಿ ಮತ್ತು ಸಿಬ್ಬಂದಿ ನೇಮಕ ಸೇರಿ ಇತರ ವಿವರಗಳ ಬಗ್ಗೆ ಡಿಸಿ ನಲಿನ್​ ಅತುಲ್​ ವೀಕ್ಷಕರಿಗೆ ಮಾಹಿತಿ ನೀಡಿದರು.

ಮತ ಎಣಿಕೆ ಕೇಂದ್ರದಲ್ಲಿ ಭದ್ರತೆ ದೃಷ್ಟಿಯಿಂದ ಸಿ.ಸಿ.ಟಿ.ವಿ ವ್ಯವಸ್ಥೆ, ಬ್ಯಾರಿಕೇಡಿಂಗ್​ ವ್ಯವಸ್ಥೆ ಮತ್ತು ಪೊಲೀಸ್​ ಅಧಿಕಾರಿ ಮತ್ತು ಸಿಬ್ಬಂದಿ ನಿಯೋಜಿಸಲಾಗಿದೆ. ಎಣಿಕೆ ದಿನದಂದು ವಾಹನ ದಟ್ಟಣೆ ತಡೆಯಲು ವಿವಿಧ ಕಡೆ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಿದ್ದೇವೆ. ಮತ ಎಣಿಕೆ ಸಿಬ್ಬಂದಿಗಳ, ಎಣಿಕೆ ಏಜೆಂಟ್​ಗಳ ತಪಾಸಣೆಗಾಗಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಎಸ್ಪಿ ಯಶೋದಾ ವಿವರಿಸಿದರು. ಎಡಿಸಿ ಸಾವಿತ್ರಿ ಕಡಿ ಸೇರಿ ಚುನಾವಣಾ ವಿಭಾಗದ ಅಧಿಕಾರಿಗಳಿದ್ದರು.