ಜಿಲ್ಲೆ

ಹಲ್ಮಿಡಿ ಶಾಸನ ಪ್ರತಿಕೃತಿ ಅನಾವರಣಗೊಳಿಸಿದ‌ ಸಚಿವ ತಂಗಡಗಿ

ಕೊಪ್ಪಳ: ಸುವರ್ಣ ಕರ್ನಾಟಕ ಸಂಭ್ರಮ ಅಂಗವಾಗಿ ನಗರದ ಜಿಲ್ಲಾಡಳಿತ ಭವನ ಆವರಣದಲ್ಲಿ ಶುಕ್ರವಾರ ಕನ್ನಡ ಮತ್ತು ಸಂಸ್ಕೃತಿ‌‌‌ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಕನ್ನಡದ ಮೊದಲ‌ ಶಾಸನ ಹಲ್ಮಿಡಿ ಪ್ರತಿಕೃತಿ ಅನಾವರಣಗೊಳಿಸಿದರು.

ವಾದ್ಯ ಮೇಳದೊಂದಿಗೆ ಕನ್ನಡ ತಾಯಿ ಭುವನೇಶ್ವರಿ ದೇವಿ ಭಾವಚಿತ್ರ ಮೆರವಣಿಗೆ ಆಯೋಜಿಸಲಾಯಿತು. ಸಚಿವರು ಮೆರವಣಿಗೆಗೂ ಚಾಲನೆ ನೀಡಿದರು. ಸಂಸದ ರಾಜಶೇಖರ ಹಿಟ್ನಾಳ, ಡಿಸಿ ನಲಿನ್ ಅತುಲ್, ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ, ಎಡಿಸಿ ಸಿದ್ರಾಮೇಶ್ವರ, ಎಸಿ ಕ್ಯಾ.ಮಹೇಶ ಮಾಲಗಿತ್ತಿ ಇತರಿದ್ದರು