ಕೊಪ್ಪಳದಿಂದ ಅಯೋಧ್ಯೆಗೆ ವಿಶೇಷ ರೈಲು ಸಂಚಾರ ಆರಂಭಕ್ಕೆ ಒತ್ತಾಯಿಸಿ ಸಂಸದ ಸಂಗಣ್ಣ ಕರಡಿ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿಗೆ ಶುಕ್ರವಾರ ದೆಹಲಿಯಲ್ಲಿ ಮನವಿ ಸಲ್ಲಿಸಿದರು. ಮಾಜಿ ಶಾಸಕರಾದ ಪರಣ್ಣ ಮುನವಳ್ಳಿ, ಬಸವರಾಜ ದಢೇಸುಗೂರು, ವಿಪ ಮಾಜಿ ಸದಸ್ಯ ಮಹಾಂತೇಶ್​ ಕವಟಗಿಮಠ, ಕೊಪ್ಪಳ ಜಿಪಂ ಮಾಜಿ ಸದಸ್ಯ ಎಚ್​.ಎಂ.ಸಿದ್ದರಾಮಸ್ವಾಮಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರಸಿಂಗ್​ ರಾವ್​ ಕುಲಕರ್ಣಿ ಇದ್ದರು.  
ಜಿಲ್ಲೆ

ಅಯೋಧ್ಯೆಗೆ ವಿಶೇಷ ರೈಲು ಸಂಚಾರ ಆರಂಭಿಸಲು ಸಂಸದ ಸಂಗಣ್ಣ ಕರಡಿ ಮನವಿ

ಕೊಪ್ಪಳ: ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ತೆರಳಲು ಅನುಕೂಲವಾಗುವಂತೆ ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಅಯೋಧ್ಯೆಗೆ ವಿಶೇಷ ರೈಲು ಸಂಚಾರ ಆರಂಭಕ್ಕೆ ಒತ್ತಾಯಿಸಿ ಸಂಸದ ಸಂಗಣ್ಣ ಕರಡಿ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿಗೆ ನವದೆಹಲಿಯಲ್ಲಿ ಶುಕ್ರವಾರ ಮನವಿ ಸಲ್ಲಿಸಿದರು.

ಐದು ಶತನಮಾನಗಳಿಂದ ಕಾತುರದಿಂದ ಕಾಯುತ್ತಿದ್ದ ಶ್ರೀರಾಮ ಮಂದಿರ ಉದ್ಘಾಟನೆ ಜ.22 ರಂದು ಜರುಗಲಿದೆ. ರಾಮನ ಬಂಟ ಹನುಮ ಜನ್ಮ ಸ್ಥಳ ಅಂಜನಾದ್ರಿ ಭಾಗದ ಜನತೆಗೂ ರಾಮ ಮಂದಿರ ಉದ್ಘಾಟನೆ ಕಣ್ತುಂಬಿಕೊಳ್ಳುವ ಬಯಕೆ ಇದೆ. ಕೊಪ್ಪಳದಿಂದ ಅಯೋಧ್ಯೆಗೆ ವಿಶೇಷ ರೈಲು ಸಂಚಾರ ಆರಂಭಿಸಿದರೆ ಅನುಕೂಲವಾಗಲಿದೆ.

ಶತಮಾನಗಳ ಕನಸು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ನನಸಾಗುತ್ತಿದೆ. ಅಯೋಧ್ಯೆ ಸಮಗ್ರ ಅಭಿವೃದ್ಧಿಗೆ ಸಾವಿರಾರು ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಅದರಂತೆ ಅಂಜನಾದ್ರಿ ಅಭಿವೃದ್ಧಿ ಮಾಡಬೇಕು. ವಿಶೇಷ ರೈಲು ಸಂಚರ ಆರಂಭಿಸಲು ಪ್ರಸ್ತಾವನೆ ಸಲ್ಲಿಸಿದ್ದು, ಶ್ರೀ ಹಸಿರು ನಿಶಾನೆ ಕೊಡಿಸಬೇಕು ಎಂದು ಒತ್ತಾಯಿಸಿದರು.

ಮಾಜಿ ಶಾಸಕರಾದ ಪರಣ್ಣ ಮುನವಳ್ಳಿ, ಬಸವರಾಜ ದಢೇಸುಗೂರು, ವಿಪ ಮಾಜಿ ಸದಸ್ಯ ಮಹಾಂತೇಶ್​ ಕವಟಗಿಮಠ, ಕೊಪ್ಪಳ ಜಿಪಂ ಮಾಜಿ ಸದಸ್ಯ ಎಚ್​.ಎಂ.ಸಿದ್ದರಾಮಸ್ವಾಮಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರಸಿಂಗ್​ ರಾವ್​ ಕುಲಕರ್ಣಿ ಇತರರಿದ್ದರು.